ಭಾನುವಾರ, ಆಗಸ್ಟ್ 7, 2022
21 °C

40 ಕಾರ್ಮಿಕರಿಗೆ ಆಹಾರಧಾನ್ಯ ಕಿಟ್ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಪ್ರವರ್ಧ ಸ್ವಯಂ ಸೇವಾ ಸಂಸ್ಥೆ, ಬೆಂಗಳೂರಿನ ಅಜೀಂ ಪ್ರೇಮ್‍ಜಿ ಫಿಲಾಂತ್ರಪಿಕ್ ಇನಿಷಿಯೇಟಿವ್ಸ್ ಹಾಗೂ ಆರ್ಬಿಟ್ ಸಂಸ್ಥೆ ವತಿಯಿಂದ ಬೀದರ್ ತಾಲ್ಲೂಕಿನ ಘೋಡಂಪಳ್ಳಿಯಲ್ಲಿ 40 ಜನ ವಲಸೆ ಕಾರ್ಮಿಕರಿಗೆ ಆಹಾರಧಾನ್ಯ ಕಿಟ್, ಸ್ಯಾನಿಟೈಸರ್ ಹಾಗೂ ಮಾಸ್ಕ್ ವಿತರಿಸಲಾಯಿತು.

ಪ್ರವರ್ಧ ಸಂಸ್ಥೆಯ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಸುನೀಲ್ ಬಿ ಮಾತನಾಡಿ, ‘ಬಿಹಾರ, ಉತ್ತರಪ್ರದೇಶ, ಆಂಧ್ರಪ್ರದೇಶ ಸೇರಿದಂತೆ ವಿವಿಧೆಡೆಯಿಂದ ಬಹಳಷ್ಟು ಕಾರ್ಮಿಕರು ಜಿಲ್ಲೆಗೆ ವಲಸೆ ಬಂದಿದ್ದಾರೆ. ಕಟ್ಟಡ ನಿರ್ಮಾಣ, ಇಟ್ಟಿಗೆ ತಯಾರಿಕೆ ಹಾಗೂ ವಿವಿಧ ಕಾರ್ಖಾನೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೋವಿಡ್ ಪ್ರಯುಕ್ತ ವಿಧಿಸಿರುವ ಲಾಕ್‍ಡೌನ್‍ನಿಂದ ತೊಂದರೆಗೆ ಒಳಗಾಗಿರುವ ಕಾರಣ ಅವರಿಗೆ ಆಹಾರಧಾನ್ಯ ಕಿಟ್ ವಿತರಿಸಲಾಗಿದೆ’ ಎಂದು ತಿಳಿಸಿದರು.

‘ಕಿಟ್ 10 ಕೆ.ಜಿ ಅಕ್ಕಿ, 5 ಕೆ.ಜಿ ಗೋಧಿ ಹಿಟ್ಟು, 1 ಕೆ.ಜಿ ಸಿಹಿ ಎಣ್ಣೆ, 1 ಕೆ.ಜಿ. ಬೇಳೆ, 1 ಕೆ.ಜಿ ಸಕ್ಕರೆ, ಉಪ್ಪು, ಖಾರ ಮೊದಲಾದ ಸಾಮಗ್ರಿಗಳನ್ನು ಒಳಗೊಂಡಿದೆ’ ಎಂದು ತಿಳಿಸಿದರು.

‘ವಲಸೆ ಕಾರ್ಮಿಕರು ತಪ್ಪದೇ ಕೋವಿಡ್ ಲಸಿಕೆ ಪಡೆಯಬೇಕು. ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು’ ಎಂದು ಮನವಿ ಮಾಡಿದರು.

ಸಂಸ್ಥೆಯ ಆಪ್ತ ಸಮಾಲೋಚಕ ಕಲ್ಲಪ್ಪ, ಕ್ಷೇತ್ರ ಕಾರ್ಯಕರ್ತರಾದ ಸತೀಶ, ಸಾಧನಾ, ಜಗದೀಶ, ಶ್ರೀದೇವಿ, ಸೈಮನ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು