ಸೋಮವಾರ, ಮಾರ್ಚ್ 20, 2023
30 °C

ಕಟ್ಟಡ ಕಾರ್ಮಿಕರಿಗೆ ಆಹಾರ ಧಾನ್ಯ ಕಿಟ್ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜನವಾಡ: ಬೀದರ್ ತಾಲ್ಲೂಕಿನ ಜನವಾಡದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗೆ ಆಹಾರ ಧಾನ್ಯ ಕಿಟ್ ವಿತರಿಸಲಾಯಿತು.

ಸಂಸದ ಭಗವಂತ ಖೂಬಾ ಹಾಗೂ ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ ಜಂಟಿಯಾಗಿ ಕಿಟ್ ವಿತರಣೆಗೆ ಚಾಲನೆ ನೀಡಿದರು.

ಕೊರೊನಾ ಸೋಂಕಿನಿಂದ ಜನರ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. ಸಂಕಷ್ಟದಲ್ಲಿರುವ ಬಡವರಿಗೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಪಡಿತರ ವಿತರಿಸಲಾಗುತ್ತಿದೆ ಎಂದು ಭಗವಂತ ಖೂಬಾ ತಿಳಿಸಿದರು.

ಕೋವಿಡ್ ಲಸಿಕೆ ಸಂಪೂರ್ಣ ಸುರಕ್ಷಿತವಾಗಿದೆ. ಪ್ರಧಾನಮಂತ್ರಿ ಅವರು ಕೂಡ ಲಸಿಕೆ ಪಡೆದಿದ್ದಾರೆ. ಹೀಗಾಗಿ ಕೋವಿಡ್ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಲಸಿಕೆ ಪಡೆಯಬೇಕು. ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಹೇಳಿದರು.

ಬಿಜೆಪಿ ಮಂಡಲ ಅಧ್ಯಕ್ಷ ರಾಜೇಂದ್ರ ಪೂಜಾರಿ, ಕಾರ್ಮಿಕ ಅಧಿಕಾರಿ ರಮೇಶ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು