ಬುಧವಾರ, ಜುಲೈ 28, 2021
21 °C

ಬಡವರಿಗೆ ಆಹಾರಧಾನ್ಯ ಕಿಟ್ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜನವಾಡ: ಬೆಂಗಳೂರಿನ ಮಹಾ ಬೋಧಿ ಸೊಸೈಟಿ ಸಂಸ್ಥಾಪಕ ಬುದ್ಧ ರಖ್ಖಿತ ಭಂತೆ ಅವರ 100ನೇ ಜನ್ಮದಿನದ ಪ್ರಯುಕ್ತ ಬೀದರ್ ತಾಲ್ಲೂಕಿನ ರೇಕುಳಗಿ ಮೌಂಟ್‍ನ ಅನಾಥ ಪಿಂಡಕ ಬುದ್ಧ ವಿಹಾರದಲ್ಲಿ ಕೋವಿಡ್‍ನಿಂದ ಸಂಕಷ್ಟಕ್ಕೆ ಒಳಗಾದವರಿಗೆ ಆಹಾರಧಾನ್ಯ ಕಿಟ್ ವಿತರಿಸಲಾಯಿತು.

ರೇಕುಳಗಿ, ಬೋರಾಳ, ಮನ್ನಾಎಖ್ಖೆಳ್ಳಿ, ಮೀನಕೇರಾ ಕ್ರಾಸ್‍ನಲ್ಲಿ ವಾಸವಾಗಿರುವ ಬಡವರು, ಅಂಗವಿಕಲರು, ವಿಧವೆಯರು ಹಾಗೂ ನಿರಾಶ್ರಿತರಿಗೆ ವಿವಿಧ ಆಹಾರ ಸಾಮಗ್ರಿಗಳನ್ನು ಒಳಗೊಂಡ ಕಿಟ್ ವಿತರಣೆ ಮಾಡಲಾಯಿತು.

ಭಂತೆ ರೇವತ, ಭಂತೆ ಧರ್ಮಪಾಲ್, ಭಂತೆ ಬೋಧಿ, ಭಿಕ್ಕುಣಿ ಮಹಾ ಪ್ರಜಾಪತಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.