ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ

Last Updated 23 ಫೆಬ್ರುವರಿ 2020, 10:49 IST
ಅಕ್ಷರ ಗಾತ್ರ

ಬೀದರ್: ಇಲ್ಲಿಯ ಶಿವನಗರದ ಪಾಪನಾಶ ದೇವಸ್ಥಾನದ ಆವರಣದಲ್ಲಿ ಶಿವರಾತ್ರಿ ಪ್ರಯುಕ್ತ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಿತು.

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳ್ಳಿ ಉದ್ಘಾಟಿಸಿ ಮಾತನಾಡಿ,‘ಮಹಿಳೆಯರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸದೃಢರಾಗಬೇಕು’ ಎಂದು ಹೇಳಿದರು.

‘ಮಹಿಳೆಯರು ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳ ಲಾಭ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಚಿದ್ರಿ ಮಾತನಾಡಿ,‘ಮಹಿಳೆಯರಿಗೆ ಸಾಕಷ್ಟು ಉದ್ಯೋಗವಕಾಶಗಳು ಇವೆ. ಅವುಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಬೇಕು’ ಎಂದು ಸಲಹೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಶಶಿಕಾಂತ ಕುಲಕರ್ಣಿ ಮಾತನಾಡಿದರು.

ಪ್ರಸನ್ನಲಕ್ಷ್ಮಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗೌತಮ ಶಿಂಧೆ, ಶಾರದಾ, ಶೋಭಾ ಕಟ್ಟಿ, ಶರಣು ಬಸಪ್ಪ, ಶಂಭುಲಿಂಗ, ತರಬೇತಿ ಕೇಂದ್ರದ ನಿರ್ದೇಶಕ ಶಿವಪ್ರಸಾದ, ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟದ ಅಧ್ಯಕ್ಷೆ ಲಕ್ಷ್ಮಿ ಇದ್ದರು.

ಮಹಿಳಾ ಶಕ್ತಿ ಕೇಂದ್ರದ ಜಿಲ್ಲಾ ಸಂಯೋಜಕಿ ಶಾಲಿನಿ ಫ್ಲಾರೆನ್ಸ್ ಸ್ವಾಗತಿಸಿದರು. ಮಕ್ಕಳ ರಕ್ಷಣಾಧಿಕಾರಿ ಗೌರಿಶಂಕರ್ ಪರತಾಪುರೆ ನಿರೂಪಿಸಿದರು. ಮಹಿಳಾ ಅಭಿವೃದ್ಧಿ ನಿರೀಕ್ಷಕಿ ಯಲ್ಲಮ್ಮ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT