ಬುಧವಾರ, ಆಗಸ್ಟ್ 4, 2021
26 °C
ಉಪವಿಭಾಗಾಧಿಕಾರಿ ಭಂವರಸಿಂಗ್‌ ಮೀನಾರಿಂದ ಸೌಕರ್ಯ ಪರಿಶೀಲನೆ

ಚಿಟಗುಪ್ಪ: ಖಾಸಗಿ ಸಭಾ ಭವನದಲ್ಲಿ ಕೋವಿಡ್ 19 ಆಸ್ಪತ್ರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಚಿಟಗುಪ್ಪ: ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಅವರ ಚಿಕಿತ್ಸೆಗಾಗಿ ಖಾಸಗಿ ಸಭಾ ಭವನದಲ್ಲಿ ಆಸ್ಪತ್ರೆ ಆರಂಭಿಸಲಾಗಿದೆ.

ಉಪವಿಭಾಗಾಧಿಕಾರಿ ಭಂವರಸಿಂಗ್‌ ಮೀನಾ ಆಸ್ಪತ್ರೆಗೆ ಭೇಟಿ ನೀಡಿ ಸೌಕರ್ಯ ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿ ‘ಖಾಸಗಿ ಸಭಾ ಭವನದಲ್ಲಿ ಆರಂಭಿಸಲಾದ ಕೋವಿಡ್ ಆಸ್ಪತ್ರೆಯಲ್ಲಿ 50 ಹಾಸಿಗೆಗಳ ವ್ಯವಸ್ಥೆ ಇದೆ. ಪಟ್ಟಣ ಸೇರಿ ತಾಲ್ಲೂಕಿನಾದ್ಯಂತ ಸೋಂಕು ಪತ್ತೆಯಾದ ವ್ಯಕ್ತಿಗಳಿಗೆ ಇಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ವೈದ್ಯರು, ವೈದ್ಯಕೀಯ ಉಪಕರಣಗಳ ವ್ಯವಸ್ಥೆ ಮಾಡಲಾಗಿದೆ. ಜನರು ಭಯಪಡುವ ಅವಶ್ಯಕತೆ ಇಲ್ಲ. ಅಂತರ ಕಾಯ್ದುಕೊಂಡು ವ್ಯವಹರಿಸಬೇಕು. ಮಾಸ್ಕ್ ಧರಿಸಬೇಕು’ ಎಂದು ತಿಳಿಸಿದರು.

ತಹಶೀಲ್ದಾರ್ ನಾಗಯ್ಯ ಸ್ವಾಮಿ ಹಿರೇಮಠ, ತಾಲ್ಲೂಕು ವೈದ್ಯಾಧಿಕಾರಿ ಡಾ.ಅಶೋಕ ಮೈಲಾರಿ, ವೈದ್ಯ ಡಾ.ವೀರನಾಥ ಕನಕ, ಪುರಸಭೆ ಮುಖ್ಯಾಧಿಕಾರಿ ಶ್ರೀಪಾದ, ನೋಡಲ್ ಅಧಿಕಾರಿ ಡಾ.ಗೋವಿಂದರಾವ ಹಾಗೂ ಕಂದಾಯ ನಿರೀಕ್ಷಕ ಮಹಾರುದ್ರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು