ಬೀದರ್: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಮಂಗಳವಾರ ನಗರದ ನೌಬಾದ್ ಸಮೀಪದ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ, ಮಕ್ಕಳ ಶೈಕ್ಷಣಿಕ ಪ್ರಗತಿಯನ್ನು ಪರಿಶೀಲಿಸಿದರು.

ಮಾರ್ಚ್ನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದ್ದು, ಈ ತರಗತಿಯ ಮಕ್ಕಳ ಶೈಕ್ಷಣಿಕ ಪ್ರಗತಿ ಪರಿಶೀಲಿಸಿದರು. ವಿದ್ಯಾರ್ಥಿಗಳೊಂದಿಗೆ ಗಣಿತ ವಿಷಯದ ಕುರಿತು ಸಂವಾದ ನಡೆಸಿದರು. ಇದುವರೆಗೆ ಕಲಿತಿರುವ ಗಣಿತ ಪ್ರಶ್ನೆಗಳನ್ನು ಬಿಡಿಸುವಂತೆ ಹೇಳಿ ಸ್ಥಳದಲ್ಲೇ ವಿದ್ಯಾರ್ಥಿಗಳನ್ನು ಪರೀಕ್ಷಿಸಿದರು. ನಂತರ ಗಣಿತ ಪಠ್ಯಕ್ರಮದ ಒಂದೆರಡು ಪಾಠಗಳನ್ನು ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಹೇಳಿಕೊಟ್ಟರು. ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚಿನ ತರಬೇತಿಯನ್ನು ಹಾಗೂ ನಿರಂತರ ಪರೀಕ್ಷೆಯನ್ನು ವಾರಕ್ಕೊಮ್ಮೆ ಕೈಗೊಳ್ಳುವಂತೆ ಬೀದರ್ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಆರ್.ದೊಡ್ಡೆ ಅವರಿಗೆ ಸೂಚಿಸಿದರು.

ಈಗಾಗಲೇ ಡಿಸೆಂಬರ್ ತಿಂಗಳಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳ ಪಠ್ಯಕ್ರಮ ಪೂರ್ಣಗೊಂಡಿದೆ. ಉಳಿದ ಮೂರು ತಿಂಗಳಲ್ಲಿ ಪಠ್ಯಕ್ರಮ ಪುನರಾವರ್ತನೆ ಹಾಗೂ ಪಾಸಿಂಗ್ ಪ್ಯಾಕೇಜ್ ನಿಟ್ಟಿನಲ್ಲಿ ವಿಶೇಷ ತರಗತಿಗಳನ್ನು ನಿರಂತರವಾಗಿ ಹೇಳಿಕೊಡಲಾಗುತ್ತಿದೆ. ಸದ್ಯ ಬೀದರ್ ಜಿಲ್ಲೆಯಲ್ಲಿ ಸುಮಾರು ಎಂಟು ಸಾವಿರ ವಿದ್ಯಾರ್ಥಿಗಳು ಎಸ್ಎಸ್ಎಸ್ಸಿ ಪರೀಕ್ಷೆ ಬರೆಯಲಿದ್ದಾರೆ ಎಂದು ಬಿ.ಆರ್.ದೊಡ್ಡೆ ಅವರು ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.