ಭಾನುವಾರ, ಏಪ್ರಿಲ್ 18, 2021
31 °C

22ರಂದು ಸಂಗಮದಲ್ಲಿ ಜಿಲ್ಲಾಧಿಕಾರಿ ವಾಸ್ತವ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌. ಫೆ.22ರಂದು ಕಮಲನಗರ ತಾಲ್ಲೂಕಿನ ಸಂಗಮ ಗ್ರಾಮದಲ್ಲಿ ವಾಸ್ತವ್ಯ ಮಾಡಲು ನಿರ್ಧರಿಸಿದ್ದಾರೆ.

ಕಂದಾಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಕಾರ್ಯ ಸೂಚಿಗಳನ್ವಯ ಫಲಾನುಭವಿಗಳಿಂದ ಅರ್ಜಿಗಳನ್ನು ಸಂಗ್ರಹಿಸಿ ಅರ್ಜಿಗಳ ಮೇಲೆ ಯಾವ ಹಂತದಲ್ಲಿ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎನ್ನುವ ಮಾಹಿತಿ ಸಂಗ್ರಹಿಸಲಿದ್ದಾರೆ.

ಎಲ್ಲ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಗ್ರಾಮದಲ್ಲಿ ಹಾಜರಾಗಿ ಜನರ ಕುಂದು ಕೊರತೆಗಳನ್ನು ಪರಿಹರಿಸಬೇಕು ಎಂದು ಸೂಚನೆ ನೀಡಲಾಗಿದೆ. ತಾಲ್ಲೂಕು ಮಟ್ಟದ ಅಧಿಕಾರಿಗಳಿಗೂ ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಹಾಜರಿರುವಂತೆ ಸೂಚನೆ ನೀಡಲಾಗಿದೆ.

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಫೆ.20ರಂದು ಜಿಲ್ಲಾಧಿಕಾರಿಗಳು ವಾಸ್ತವ್ಯ ಮಾಡುತ್ತಿದ್ದಾರೆ. ಆದರೆ, ಫೆ.20 ರಂದು ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಬೀದರ್‌ ಜಿಲ್ಲೆಗೆ ಭೇಟಿ ನೀಡುತ್ತಿರುವ ಕಾರಣ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಫೆ.22ಕ್ಕೆ ಮುಂದೂಡಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು