ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ಕಾಲೇಜಿಗೆ ಜಿಲ್ಲಾ ಹಸಿರು ಚಾಂಪಿಯನ್ ಪ್ರಶಸ್ತಿ

ಮಳೆ ನೀರು ಸಂಗ್ರಹ ವಿಧಾನ ಅಳವಡಿಕೆ: ಸಿಇಒ ಜಹೀರಾ ನಸೀಮ್ ಸಲಹೆ
Last Updated 19 ಆಗಸ್ಟ್ 2021, 12:01 IST
ಅಕ್ಷರ ಗಾತ್ರ

ಬೀದರ್: ಇಲ್ಲಿಯ ಕರ್ನಾಟಕ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಪದವಿ ಕಾಲೇಜಿಗೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಅಧೀನದ ಮಹಾತ್ಮ ಗಾಂಧಿ ನ್ಯಾಷನಲ್ ಕೌನ್ಸಿಲ್ ಆಫ್ ರೂರಲ್ ಎಜುಕೇಷನ್ ವತಿಯಿಂದ ನೀಡಲಾಗುವ ಜಿಲ್ಲಾ ಹಸಿರು ಚಾಂಪಿಯನ್ ಪ್ರಶಸ್ತಿ ಲಭಿಸಿದೆ.

ನೀರು, ತಾಜ್ಯ, ಶಕ್ತಿ ಸಂಪನ್ಮೂಲಗಳ ನಿರ್ವಹಣೆ, ಹಸಿರು ವಾತಾವರಣ ಹಾಗೂ ಸ್ವಚ್ಛತೆಗಾಗಿ ಕಾಲೇಜನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ನಗರದ ಕಾಲೇಜಿನಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್ ಫಲಕ ಹಾಗೂ ಪ್ರಶಸ್ತಿ ಪತ್ರ ಪ್ರದಾನ ಮಾಡಿದರು.

ಕಾಲೇಜು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜತೆಗೆ ಮಳೆ ನೀರು ಕೊಯ್ಲು, ತ್ಯಾಜ್ಯ ನಿರ್ವಹಣೆ, ಪರಿಸರ, ಸ್ವಚ್ಛತೆ ಜಾಗೃತಿ ಕಾರ್ಯಗಳಲ್ಲೂ ತೊಡಗಿಸಿಕೊಂಡಿರುವುದು ಪ್ರಶಂಸನೀಯ ಎಂದು ಅವರು ಹೇಳಿದರು.

ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳು ಮಳೆ ನೀರು ಸಂಗ್ರಹ ವಿಧಾನ ಅಳವಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಬಸವರಾಜ ಪಾಟೀಲ ಅಷ್ಟೂರ ಮಾತನಾಡಿ, ಕರ್ನಾಟಕ ಪದವಿ ಕಾಲೇಜು ಮಳೆ ನೀರು ಕೊಯ್ಲು ವಿಧಾನ, ಪ್ಲಾಸ್ಟಿಕ್ ಮುಕ್ತ ಹಸಿರು ವಾತಾವರಣ, ಶುದ್ಧ ಕುಡಿಯುವ ನೀರು, ಎಲ್‍ಇಡಿ ಪರದೆ ಮೊದಲಾದ ಸೌಲಭ್ಯಗಳಿಂದ ಗಮನ ಸೆಳೆದಿದೆ ಎಂದು ಹೇಳಿದರು.

ಗುಲಬರ್ಗಾ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲೇ ಅತ್ಯಧಿಕ 45 ಕಿಲೊ ವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಉತ್ಪಾದನಾ ಘಟಕ ಹೊಂದಿದೆ. ಶಕ್ತಿ ಪುನರ್ ಬಳಕೆ ಪದವಿ ಕೋರ್ಸ್‍ನ್ನೂ ಆರಂಭಿಸಿದೆ ಎಂದು ತಿಳಿಸಿದರು.

ಕಾಲೇಜು ವತಿಯಿಂದ ಅಮಲಾಪುರ, ಕೊಳಾರ (ಬಿ), ಆಣದೂರು, ಅಷ್ಟೂರು ಹಾಗೂ ಗೋರನಳ್ಳಿ ಗ್ರಾಮಗಳನ್ನು ದತ್ತು ಪಡೆಯಲಾಗಿದೆ. ಎನ್‍ಎಸ್‍ಎಸ್ ಘಟಕ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ಈ ಗ್ರಾಮಗಳಲ್ಲಿ ಮನೆಗೊಂದು ಸಸಿ ನೆಡಲಾಗಿದೆ. ಪರಿಸರ, ಆರೋಗ್ಯ, ಸ್ವಚ್ಛತೆ, ಶೌಚಾಲಯ ಬಳಕೆ ಅರಿವು ಮೂಡಿಸಲಾಗುತ್ತಿದೆ. ಆರೋಗ್ಯ ತಪಾಸಣೆ ಶಿಬಿರಗಳನ್ನು ಕೂಡ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಪ್ರಾಚಾರ್ಯ ಡಾ. ಮಲ್ಲಿಕಾರ್ಜುನ ಚಲುವಾ, ಉಪ ಪ್ರಾಚಾರ್ಯ ಡಾ. ಮಲ್ಲಿಕಾರ್ಜುನ ಹಂಗರಗೆ, ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಸುನೀಲ ಮೂಲಗೆ, ಉಪನ್ಯಾಸಕ ಸಚಿನ್ ವಿಶ್ವಕರ್ಮ, ಐಕ್ಯೂಎಸಿ ಸಹ ಸಂಯೋಜನಾಧಿಕಾರಿ ರಾಜಮೋಹನ್ ಪರದೇಸಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT