ಶುಕ್ರವಾರ, ಸೆಪ್ಟೆಂಬರ್ 25, 2020
26 °C

ಸಚಿವರಿಂದ ಮೃತ ಬಾಲಕನ ಕುಟುಂಬಕ್ಕೆ ಸಾಂತ್ವನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭಾಲ್ಕಿ: ತಾಲ್ಲೂಕಿನ ಚಳಕಾಪೂರ ವಾಡಿಯಲ್ಲಿ ಈಚೆಗೆ ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟ ಬಾಲಕರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ ಭೇಟಿ ನೀಡಿ ಸಾಂತ್ವನ ಹೇಳಿದರು.

ಘಟನೆ ಕುರಿತು ಕುಟುಂಬದವರಿಂದ ಮಾಹಿತಿ ಪಡೆದುಕೊಂಡರು.

‘ಇಡೀ ಕುಟುಂಬಕ್ಕೆ ಆಧಾರ ಸ್ತಂಭದಂತಿದ್ದ, ಹೆತ್ತ ಮಗನನ್ನು ಕಳೆದುಕೊಂಡು ದುಃಖದಲ್ಲಿದ್ದೀರಿ. ನಾನು ನಿಮ್ಮ ಜತೆಗೆ ಇರುತ್ತೇನೆ’ ಎಂದು ಹೇಳುವ ಮೂಲಕ ಧೈರ್ಯ ತುಂಬಿದರು.

ಕುಟುಂಬದವರಿಗೆ ಸರ್ಕಾರದಿಂದ ಪರಿಹಾರ ಕೊಡಿಸಲು ಮುಖ್ಯಮಂತ್ರಿ ಅವರೊಂದಿಗೆ ಮಾತನಾಡುತ್ತೇನೆ ಎಂದು ಸಚಿವರು ತಿಳಿಸಿದರು.

ಸಚಿವರು ವೈಯಕ್ತಿಕವಾಗಿ ₹51,000 ನೀಡಿದರು. ಕುಟುಂಬಕ್ಕೆ ಎರಡು ಆಕಳುಗಳನ್ನು ಕೊಡಿಸುತ್ತೇನೆ. ಮಗಳ ಮದುವೆಗೂ  ಸಹಾಯ ಮಾಡುತ್ತೇನೆ ಎಂದು ಸಚಿವರು ಭರವಸೆ ನೀಡಿದರು.

ತಹಶೀಲ್ದಾರ್ ಅಣ್ಣಾರಾವ್ ಪಾಟೀಲ ಹಾಗೂ ಇತರರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.