ಬೀದರ್: ‘ವಿಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆಗೆ ವಿದ್ಯಾರ್ಥಿಗಳು ಸಿದ್ಧರಾಗುವ ಅಗತ್ಯವಿದೆ’ ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಡಾ.ರಜನೀಶ ವಾಲಿ ತಿಳಿಸಿದರು.

ರಾಷ್ಟ್ರೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಶಾಲಾ ಶಿಕ್ಷಣ ಹಾಗು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ನಗರದ ಬಿ.ವ್ಹಿ.ಬಿ. ಪದವಿ ಕಾಲೇಜಿನಲ್ಲಿ ಸೋಮವಾರ ಜಿಲ್ಲಾಮಟ್ಟದ 31ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದ ಜಿಲ್ಲಾಮಟ್ಟದ ಶಿಕ್ಷಕರ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಮೂಲ ವಿಜ್ಞಾನ ಕಲಿಕೆಯೊಂದಿಗೆ ವೈಜ್ಞಾನಿಕ ಮನೋಭಾವ ಹಾಗೂ ತಾರ್ಕಿಕ ಪ್ರಜ್ಞೆಯೊಂದಿಗೆ ವಿಜ್ಞಾನದ ಅನ್ವೇಷಣೆ, ಸಂಶೋಧನಾ ಪ್ರವೃತ್ತಿ ಬೆಳೆಸಬೇಕು ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಮಾಜಿ ಆಡಳಿತ ಮಂಡಳಿ ಸದಸ್ಯರಾದ ಬಾಬುರಾವ ದಾನಿ ಮಾತನಾಡಿ, ವಿದ್ಯಾರ್ಥಿಗಳು ವಿಜ್ಞಾನದ ಬಗ್ಗೆ ಆಸಕ್ತಿ ಬೆಳೆಸಿಕೊಂಡು ಅಧ್ಯಯನ ಮಾಡಬೇಕು ವಿಜ್ಞಾನ ಸಮಾವೇಶವು ಮಕ್ಕಳ ಬೌದ್ಧಿಕ ವಿಕಸನ ಹಾಗೂ ಅನ್ವೇಷಣೆಗೆ ಸಹಕಾರಿಯಾಗಿದೆ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಜ್ಞಾನ ವಿಷಯ ಪರಿವೀಕ್ಷಕ ಗುಂಡಪ್ಪ ಹುಡುಗೆ, ಪ್ರಾಂಶುಪಾಲ ಪಿ. ವಿ. ರೆಡ್ಡಿ, ಉಪ ಪ್ರಾಂಶುಪಾಲ ಅನಿಲಕುಮಾರ ಅಣದೂರೆ, ಜಿಲ್ಲಾ ವಿಜ್ಞಾನ ಸಮಿತಿಯ ಅಧ್ಯಕ್ಷ ಸುರೇಂದ್ರನಾಥ್ ಹುಡುಗಿಕರ್, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ, ಬಸವೇಶ್ವರ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಮಲ್ಲಿಕಾರ್ಜುನ ಕನಕಟ್ಟೆ, ಅನುದಾನಿತ ಪ್ರೌಢ ಶಾಲಾ ಮುಖ್ಯ ಗುರುಗಳ ಸಂಘದ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ, ವಿಜ್ಞಾನ ಸಮಿತಿಯ ಜಿಲ್ಲಾ ಕೋಶಾಧ್ಯಕ್ಷ ಕಲಾಲ ದೇವಿಪ್ರಸಾದ, ಸಮಾವೇಶದ ಜಿಲ್ಲಾ ಸಂಯೋಜಕ ಸಂಜೀವಕುಮಾರ ಸ್ವಾಮಿ, ಶೈಕ್ಷಣಿಕ ಸಂಯೋಜಕ ಅಮರ ಮಾಳಗೆ, ಸಂಪನ್ಮೂಲ ವ್ಯಕ್ತಿಗಳಾದ ಸಂಪೂರ್ಣಾನಂದ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.