ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ಜಾನಪದ ಪರಿಷತ್ತಿನ ಜಿಲ್ಲಾ ಮಟ್ಟದ ಸಭೆ

Last Updated 5 ಅಕ್ಟೋಬರ್ 2022, 13:36 IST
ಅಕ್ಷರ ಗಾತ್ರ

ಬೀದರ್: ‘ಜಾನಪದ ಪರಿಷತ್ತಿನ ಪದಾಧಿಕಾರಿಗಳು ಜನಪದ ಸಂಸ್ಕೃತಿ, ಕಲೆ ಮತ್ತು ಸಾಹಿತ್ಯವನ್ನು ಉಳಿಸುವ ದಿಸೆಯಲ್ಲಿ ಆಸಕ್ತಿಯಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ’ ಎಂದು ಜಾನಪದ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಜಗನ್ನಾಥ ಹೆಬ್ಬಾಳೆ ತಿಳಿಸಿದರು.

ಇಲ್ಲಿಯ ಕರ್ನಾಟಕ ಸಾಹಿತ್ಯ ಸಂಘದಲ್ಲಿ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಹಾಗೂ ತಾಲ್ಲೂಕು ಘಟಕಗಳ ಪದಾಧಿಕಾರಿಗಳ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು.

ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳ ಸಹಭಾಗಿತ್ವದಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಜನಪದ ವಸ್ತು ಸಂಗ್ರಹಾಲಯ, ಜನಪದ ಭವನಗಳ ನಿರ್ಮಾಣ, ಕಲಾವಿದರ ಪರಿಚಯಾತ್ಮಕ ಪುಸ್ತಕ ಪ್ರಕಟಣೆಯಂತಹ ಅರ್ಥಪೂರ್ಣ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಮಾತನಾಡಿ, ಇಲಾಖೆ ವತಿಯಿಂದ ಕಲಾವಿದರಿಗೆ ಅನೇಕ ಕಾರ್ಯಕ್ರಮ ಕೊಡಲಾಗಿದೆ. ಕಲೆಯನ್ನು ಪೋಷಿಸುವ ಕಾರ್ಯಕ್ಕೆ ಇಲಾಖೆಯಿಂದ ಪೂರ್ಣ ಸಹಕಾರ ದೊರೆಯಲಿದೆ ಎಂದರು.

ಸಂಘದ ಪ್ರಧಾನ ಕಾರ್ಯದರ್ಶಿ ಪ್ರೊ. ಎಸ್.ಬಿ.ಬಿರಾದಾರ, ಕಜಾಪ ಪ್ರಧಾನ ಕಾರ್ಯದರ್ಶಿ ನಿಜಲಿಂಗಪ್ಪ ತಗಾರೆ, ರಾಷ್ಟ್ರೀಯ ಜನಪದ ಬುಡಕಟ್ಟು ಕಲಾ ಪರಿಷತ್ತಿನ ಕಾರ್ಯದರ್ಶಿ ರಾಜಕುಮಾರ ಹೆಬ್ಬಾಳೆ, ಸುನೀತಾ ಕೂಡ್ಲಿಕರ್, ಮಹಾನಂದ ಮಡಕಿ ಇದ್ದರು.

ವಸಂತ ಹುಣಸನಾಳೆ, ಶಂಭುಲಿಂಗ ಕಾಮಣ್ಣ, ಶಿವಾನಂದ ಗುಂದಗಿ, ಸಂಗಮೇಶ ಜವಾದಿ, ಮಹಾರುದ್ರಪ್ಪ ಆಣದೂರೆ, ಶರದ್ ನಾರಾಯಣಪೇಟಕರ್, ಎಸ್.ಬಿ.ಕುಚಬಾಳ, ಶಿವರಾಜ ಖಪ್ಲೆ, ರಾಜಕುಮಾರ ಮಡಕಿ, ಮಲ್ಲಮ್ಮ ಸಂತಾಜಿ, ಶರಣಪ್ಪ ಗದಲೇಗಾಂವ, ಸಾವಿತ್ರಿಬಾಯಿ ಹೆಬ್ಬಾಳೆ, ಅಶೋಕ ಕೋರೆ ಔರಾದ್, ಮಾಣಿಕಾದೇವಿ ಪಾಟೀಲ, ಸಿದ್ದಮ್ಮ ಮುಧೋಳ, ಬಸವರಾಜ ಮಂಕಲ, ಶಿವಶರಣಪ್ಪ ಗಣೇಶಪುರ, ಮಹಾರುದ್ರ ಡಾಕುಳಗೆ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT