ಶನಿವಾರ, ಸೆಪ್ಟೆಂಬರ್ 18, 2021
22 °C

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ಸಾರ್ವಜನಿಕ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಜಿಲ್ಲೆಯ 15 ಶಿಕ್ಷಕರನ್ನು ಆಯ್ಕೆ ಮಾಡಿದೆ.

ಕಿರಿಯ ಪ್ರಾಥಮಿಕ ಶಾಲಾ ವಿಭಾಗ: ಕಮಲನಗರದ ಸರ್ಕಾರಿ ಕನ್ಯಾ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಸಂತೋಷ ಲಕ್ಷ್ಮಣರಾವ್,  ಬಸವಕಲ್ಯಾಣ ತಾಲ್ಲೂಕಿನ ಬಂಜಾರಾ ತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಸಂತೋಷ ಶರಣಪ್ಪ ಬಿರಾದಾರ, ಭಾಲ್ಕಿ ತಾಲ್ಲೂಕಿನ ಎಕಲಾಸಪುರವಾಡಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ದಿಲೀಪಕುಮಾರ ನಾಮದೇವ, ಬೀದರ್‌ ತಾಲ್ಲೂಕಿನ ಬರೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅನಿತಾ, ಹುಮನಾಬಾದ್‌ ತಾಲ್ಲೂಕಿನ ಹಂದಿಕೇರಾದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಪಾಂಡು ಭೈರನಳ್ಳಿಕರ್.

ಹಿರಿಯ ಪ್ರಾಥಮಿಕ ಶಾಲಾ ವಿಭಾಗ: ಔರಾದ್‌ ತಾಲ್ಲೂಕಿನ ಮೆಡಪಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ನರಸಿಂಗ್, ಬಸವಕಲ್ಯಾಣ ತಾಲ್ಲೂಕಿನ ಪ್ರತಾಪುರದ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಮಮತಾ ಜಡಗೆ, ಭಾಲ್ಕಿ ತಾಲ್ಲೂಕಿನ ಹಾಲಹಳ್ಳಿ(ಕೆ) ಕಾರಂಜಾ ಕ್ಯಾಂಪ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿಜ್ಞಾನ ಶಿಕ್ಷಕಿ ಉಜ್ವಲಾ ಸಂಜಯಕುಮಾರ, ಬೀದರ್‌ ನೌಬಾದ್‌ನ ಹಿಮಾಲಯ ಕಾನ್ವೆಂಟ್ ಹಿರಿಯ ಮುಖ್ಯಶಿಕ್ಷಕ ಪ್ರಾಥಮಿಕ ಶಾಲೆಯ ಅನಂತ ಕುಲಕರ್ಣಿ, ಹುಮನಾಬಾದ್‌ ತಾಲ್ಲೂಕಿನ ಜಲಸಂಘ್ವಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕಿ ಶೀಲಾ ಜೂಜಾ.

ಪ್ರೌಢ ಶಾಲಾ ವಿಭಾಗ:  ಔರಾದ್‌ ತಾಲ್ಲೂಕು ಹೆಡಗಾಪುರದ ಸರ್ಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕ ನಾಗೇಂದ್ರ ಬಿರಾದಾರ, ಬಸವಕಲ್ಯಾಣ ತಾಲ್ಲೂಕಿನ ಹಿಪ್ಪರಭಾಗದ ಸರ್ಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕ ಸಂತೋಷ ಸಾಗರ, ಭಾಲ್ಕಿ ತಾಲ್ಲೂಕಿನ ವರವಟ್ಟಿ(ಬಿ) ಸರ್ಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕಿ ಪುಷ್ಪಾವತಿ ಘಾಳೆಪ್ಪ, ಬೀದರ್‌ ತಾಲ್ಲೂಕಿನ ಬುಧೇರಾದ ಸರ್ಕಾರಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕಿ ಸಯೀದಾ ನಿಖತ್ ಪರ್ವಿನ್, ಹುಮನಾಬಾದ್ ತಾಲ್ಲೂಕಿನ ಮನ್ನಾಎಖ್ಖೆಳ್ಳಿಯ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ಸುಧೀರ್‌ ಬುಜ್ಜಿ.

ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯಿಂದ ₹ 5 ಸಾವಿರ ನಗರದು ಪುರಸ್ಕಾರ ಹಾಗೂ ಪ್ರಶಸ್ತಿಪತ್ರ ಪ್ರದಾನ ಮಾಡಲಾಗುವುದು ಎಂದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಂಗಣ್ಣ ಸ್ವಾಮಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.