ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್, ನೇರ ಪ್ರಸಾರ ವೀಕ್ಷಿಸಿದ ಕಾರ್ಯಕರ್ತರು

ಕೆಪಿಸಿಸಿ ನೂತನ ಅಧ್ಯಕ್ಷ, ಕಾರ್ಯಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ
Last Updated 2 ಜುಲೈ 2020, 15:10 IST
ಅಕ್ಷರ ಗಾತ್ರ

ಬೀದರ್: ಜಿಲ್ಲೆಯಲ್ಲಿ ಗುರುವಾರ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಬೆಂಗಳೂರಿನಲ್ಲಿ ನಡೆದ ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ, ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸತೀಶ ಜಾರಕಿಹೊಳಿ ಹಾಗೂ ಸಲೀಂ ಅಹಮ್ಮದ್ ಅವರ ಪದಗ್ರಹಣ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ವತಿಯಿಂದ ನಗರದ ಕಸ್ತೂರಿ ಇಂಟರ್‌ನ್ಯಾಷನಲ್‌ ಹೋಟೆಲ್‌ ಸಭಾಂಗಣದಲ್ಲಿ ಎಲ್ಇಡಿ ಪರದೆ ಅಳವಡಿಸಿ ಕಾರ್ಯಕ್ರಮ ನೇರ ಪ್ರಸಾರ ವೀಕ್ಷಣೆ ವ್ಯವಸ್ಥೆ ಮಾಡಲಾಗಿತ್ತು. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವಾರ್ಡ್ಗಳು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯಕರ್ತರು ಕೆಲ ಖಾಸಗಿ ಸುದ್ದಿ ವಾಹಿನಿ ಹಾಗೂ ಲಾಪ್ಟಾಪ್ಗಳಲ್ಲಿ ಝೂಮ್ ಆ್ಯಪ್ ಬಳಸಿ ಕಾರ್ಯಕ್ರಮ ನೇರ ಪ್ರಸಾರ ವೀಕ್ಷಣೆ ಮಾಡಿದರು.

ಪಕ್ಷದ ಮುಖಂಡರು, ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾರ್ಯಕ್ರಮ ಆರಂಭದಿಂದ ಮುಕ್ತಾಯದವರೆಗೂ ನೇರ ಪ್ರಸಾರ ವೀಕ್ಷಿಸಿದರು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಮಾತನಾಡಿ, ‘ಕೆಪಿಸಿಸಿಯ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ, ಎರಡನೇ ಬಾರಿಗೆ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸತೀಶ ಸತೀಶ ಜಾರಕಿಹೊಳಿ ಹಾಗೂ ಸಲೀಂ ಅಹಮ್ಮದ್ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಪಕ್ಷ ಬಲಗೊಳ್ಳಲಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಆಡಳಿತದ ಚುಕ್ಕಾಣಿ ಹಿಡಿಯಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಪಕ್ಷವು ಆರು ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಜಯ ಗಳಿಸಿದೆ. ಬರುವ ಚುನಾವಣೆಯಲ್ಲಿ ಕಾರ್ಯಕರ್ತರು ಎಲ್ಲ ಕ್ಷೇತ್ರಗಳಲ್ಲಿ ಪಕ್ಷ ವಿಜಯ ಪತಾಕೆ ಹಾರಿಸುವಂತೆ ಕೆಲಸ ಮಾಡಬೇಕು’ ಎಂದು ತಿಳಿಸಿದರು.

‘ಪಕ್ಷಕ್ಕಾಗಿ ದುಡಿದವರಿಗೆ ಪಕ್ಷದಲ್ಲಿ ಒಳ್ಳೆಯ ಸ್ಥಾನಮಾನ ಸಿಕ್ಕೇ ಸಿಗುತ್ತದೆ. ಹೀಗಾಗಿ ಯಾರೂ ತಮ್ಮನ್ನು ಗುರುತಿಸಿಲ್ಲ ಎಂದು ಬೇಸರ ಪಟ್ಟುಕೊಳ್ಳಬೇಕಿಲ್ಲ’ ಎಂದು ಹೇಳಿದರು.

ಕಾರ್ಯಕರ್ತರು ತಳಮಟ್ಟದಿಂದ ಪಕ್ಷವನ್ನು ಬಲಪಡಿಸಬೇಕು. ಕಾಂಗ್ರೆಸ್ ಅಧಿಕಾರ ಅವಧಿಯ ಜನಪರ ಕಾರ್ಯಗಳ ಬಗ್ಗೆ ಜನಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡವರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಓಬೆದುಲ್ಲಾ ಷರೀಫ್, ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಚಿದ್ರಿ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಪುಂಡಲೀಕರಾವ್, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ಎ. ಸಮಿ, ಮುಖಂಡರಾದ ಅಬ್ದುಲ್ ಮನ್ನಾನ್ ಸೇಠ್, ಬಶಿರೊದ್ದೀನ್ ಹಾಲಹಿಪ್ಪರ್ಗಾ, ವೆಂಕಟರಾವ್ ಶಿಂಧೆ, ಪಂಡಿತರಾವ್ ಚಿದ್ರಿ, ಮೀನಾಕ್ಷಿ ಸಂಗ್ರಾಮ, ಸಂಜುಕುಮಾರ ಡಿ.ಕೆ. ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT