ಮಂಗಳವಾರ, ಸೆಪ್ಟೆಂಬರ್ 28, 2021
21 °C

ಬೀದರ್ | ಮುಖ್ಯಮಂತ್ರಿ ಬದಲಾವಣೆ ಬೇಡ: ಭದ್ರೇಶ್ವರ ಮಠದ ಶಿವಕುಮಾರ ಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಿಸಬಾರದು ಎಂದು ತಾಲ್ಲೂಕಿನ ಬಾವಗಿಯ ಭದ್ರೇಶ್ವರ ಮಠದ ಶಿವಕುಮಾರ ಸ್ವಾಮಿ ಒತ್ತಾಯಿಸಿದ್ದಾರೆ.

ಅಸಮರ್ಥರಾಗಿದ್ದರೆ ಬದಲಿಸಬಹುದಿತ್ತು. ಆದರೆ, ಯಡಿಯೂರಪ್ಪ ಅವರು ಸಮರ್ಥ ನಾಯಕರಗಿದ್ದಾರೆ. ಕೋವಿಡ್, ಪ್ರವಾಹ ಪರಿಸ್ಥಿತಿಯನ್ನು ಉತ್ತಮವಾಗಿ ನಿಭಾಯಿಸಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯದ ಪ್ರತಿ ಗ್ರಾಮಗಳಲ್ಲೂ ವೀರಶೈವ ಸಮಾಜದ ಮಠಗಳು ಇವೆ. ಸಮಾಜಕ್ಕೆ ಅವುಗಳ ಕೊಡುಗೆ ಅಪಾರವಾಗಿದೆ. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಿದರೆ ಎಲ್ಲರಿಗೂ ನೋವಾಗಲಿದೆ ಎಂದು ಹೇಳಿದ್ದಾರೆ.

ಯಡಿಯೂರಪ್ಪ ಎಲ್ಲ ಧರ್ಮೀಯರನ್ನು ಸಮಾನವಾಗಿ ಕಾಣುತ್ತಾರೆ. ಹೀಗಾಗಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು