ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಾಡಿ ಇಲ್ಲ ಪ್ರತ್ಯೇಕ ರಾಜ್ಯ ಕೊಡಿ‘

Last Updated 22 ಡಿಸೆಂಬರ್ 2021, 16:08 IST
ಅಕ್ಷರ ಗಾತ್ರ

ಬೀದರ್: ‘ರಾಜ್ಯ ಸರ್ಕಾರ ಹೈದರಾಬಾದ್‌ ಕರ್ನಾಟಕ ಪ್ರದೇಶಕ್ಕೆ 2019ರಲ್ಲಿ ಕಲ್ಯಾಣ ಕರ್ನಾಟಕವೆಂದು ನಾಮಕರಣ ಮಾಡಿದೆ. ಆದರೆ, ಅಭಿವೃದ್ಧಿ ವಿಷಯದಲ್ಲಿ ಸಂಪೂರ್ಣ ನಿರ್ಲಕ್ಷ ತೋರಿದೆ. ಈ ಪ್ರದೇಶವನ್ನು ಅಭಿವೃದ್ಧಿ ಪಡಿಸಬೇಕು ಇಲ್ಲವೆ ಪ್ರತ್ಯೇಕ ರಾಜ್ಯ ಘೋಷಣೆ ಮಾಡಬೇಕು’ ಎಂದು ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ಆಗ್ರಹಿಸಿದರು.

ನಗರದ ಎಂ.ಎಸ್. ಪಾಟೀಲ ಫಂಕ್ಷನ್‌ಹಾಲ್‌ನಲ್ಲಿ ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಯ ವತಿಯಿಂದ ಈಚೆಗೆ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಅಭಿವೃದ್ಧಿಪರ, ಚಿಂತಕರ, ಬುದ್ಧಿ ಜೀವಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಬೇಕು’ ಎಂದು ಒತ್ತಾಯಿಸಿದರು.

371ನೇ(ಜೆ) ಕಲಂ ಪರಿಣಾಮಕಾರಿ ಅನುಷ್ಠಾನಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು. ಸಚಿವ ಸಂಪುಟದಲ್ಲಿ ಈ ಭಾಗದ ಶಾಸಕರಿಗೆ ಪ್ರಾತಿನಿಧ್ಯ ಕೊಡಬೇಕು. ಕೈಗಾರಿಕೆಗಳ ಸ್ಥಾಪನೆ ಮಾಡಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಸಭೆ ನಡೆಸಬೇಕು ಎಂದು ಸಮಿತಿ ಸದಸ್ಯರು ಒತ್ತಾಯಿಸಿದರು.

ಅಧ್ಯಕ್ಷತೆ ವಹಿಸಿದ್ದ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಅನಂತರೆಡ್ಡಿ ಟಿ ಮಿರ್ಜಾಪೂರ ಮಾತನಾಡಿ, ‘ಜನವರಿ ಎರಡನೇ ವಾರದಲ್ಲಿ ಬೀದರ್‌ನಲ್ಲಿ ‘ಪ್ರತ್ಯೇಕ ರಾಜ್ಯ ಕೊಡಿ’ ಎನ್ನುವ ಬೇಡಿಕೆಯನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಲಾಗುವುದು’ ತಿಳಿಸಿದರು.

‘ಗೋದಾವರಿ ಜಲಾನಯನ ಪ್ರದೇಶದ ಕಾರಂಜಾ ಯೋಜನೆ ಕಾಲಮಿತಿಯಲ್ಲಿ ಮುಗಿಸಬೇಕು. ಕಾರಂಜಾ ಜಲಾಶಯಕ್ಕೆ ಜಮೀನು ಕೊಟ್ಟ ರೈತರಿಗೆ ಸಮರ್ಪಕ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.

ಡಾ.ಆನಂದರಾವ್, ವೀರಭದ್ರಪ್ಪ ಉಪ್ಪಿನ್, ಸಂತೋಷ ಶೆಟ್ಟಿ, ಶಿವಕುಮಾರ ಬೆಲ್ದಾಳ, ಚಂದ್ರಶೇಖರ ಪಾಟೀಲ, ಮಹಮ್ಮದ್ ಅಸಿಫೋದ್ದಿನ್, ಮಹಮ್ಮದ್ ನಿಜಾಮೊದ್ದೀನ್, ಉದಯಕುಮಾರ ಅಷ್ಟೂರೆ, ಧನರಾಜ ರೆಡ್ಡಿ, ವಿಜಯಕುಮಾರ, ಕೃಷ್ಣ ರೆಡ್ಡಿ, ಬಕ್ಕಪ್ಪ, ಅನಿಲ ಹಮಿಲಪುರಕರ್, ರಘುನಾಥರಾವ್, ರೋಹನಕುಮಾರ, ಘಾಳೆಪ್ಪ ಚಾಮಾ, ಸುಧಾಕರರಾವ್ ಪಾಟೀಲ, ವಿದ್ಯಾಸಾಗರ, ಪ್ರಲ್ಹಾದ ದೇಸಾಯಿ, ವಿಶ್ವನಾಥ ಉಪ್ಪೆ, ಮಹೇಶ, ಅಣ್ಣೆಪ್ಪ ಸಿರ್ಸಿ, ಧನರಾಜ್ ಅಡ್ವೊಕೇಟ್, ಸೋಮಶೇಖರ, ವಿಶ್ವನಾಥ ಆಲೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT