ಬೀದರ್: ಕರ್ತವ್ಯಲೋಪ ಆರೋಪದ ಮೇರೆಗೆ ಬೀದರ್ ಜಿಲ್ಲೆಯ ಬಸವಕಲ್ಯಾಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಇರ್ಷಾನಾ ಅವರನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ.

ಸದರಿ ವೈದ್ಯರ ಲೀನ್ ಅನ್ನು ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನ ಕೂಡಲಸಂಗಮ ಸಮುದಾಯ ಆರೋಗ್ಯ ಕೇಂದ್ರದ ಖಾಲಿಯಿರುವ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಹುದ್ದೆಗೆ ಸ್ಥಳಾಂತರಿಸಲಾಗಿದೆ. ಸಕ್ಷಮ ಪ್ರಾಧಿಕಾರದ ಅನುಮತಿಯಿಲ್ಲದೇ ಕೇಂದ್ರ ಸ್ಥಾನ ಬಿಡತಕ್ಕದಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಶಿಸ್ತು ಪ್ರಾಧಿಕಾರಿ ಮತ್ತು ಆಯುಕ್ತ ಶಿವಕುಮಾರ ಕೆ.ಬಿ. ಆದೇಶದಲ್ಲಿ ತಿಳಿಸಿದ್ದಾರೆ.

ಇತ್ತೀಚೆಗೆ ಆಸ್ಪತ್ರೆಯಲ್ಲಿ ಮಗು ಜನನದ ನಂತರ ತಾಯಿ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದರು. ರೋಗಿಗೆ ಸೂಕ್ತ ಚಿಕಿತ್ಸೆ ನೀಡದೇ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪ ಮೇಲ್ನೋಟಕ್ಕೆ ಸಾಬೀತಾದ ಕಾರಣ ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.