ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೋಟರಿ ಕ್ಲಬ್‌ನಿಂದ ಶಾಲೆಗೆ ಬೆಂಚ್ ಕೊಡುಗೆ

Last Updated 28 ಡಿಸೆಂಬರ್ 2019, 15:56 IST
ಅಕ್ಷರ ಗಾತ್ರ

ಜನವಾಡ: ಬೀದರ್ ತಾಲ್ಲೂಕಿನ ಚಿಮಕೋಡ ಗ್ರಾಮದ ಯಲ್ಲಾಲಿಂಗೇಶ್ವರ ಪ್ರೌಢಶಾಲೆಗೆ ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿಯು ಬೆಂಚ್‌ಗಳನ್ನು ಕೊಡುಗೆಯಾಗಿ ನೀಡಿದೆ.

ಶಾಲೆಯಲ್ಲಿ ಶನಿವಾರ ನಡೆದ ಬೆಂಚ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಕ್ಲಬ್ ಅಧ್ಯಕ್ಷೆ ಡಾ. ಶ್ವೇತಾ ಮೇಗೂರ, ‘ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಾಲೆಗೆ ಬೆಂಚ್‌ಗಳನ್ನು ಒದಗಿಸಲಾಗಿದೆ’ ಎಂದು ತಿಳಿಸಿದರು.

ರೋಟೆರಿಯನ್ ಸೂರ್ಯಕಾಂತ ರಾಮಶೆಟ್ಟಿ ಮಾತನಾಡಿ, ‘ರೋಟರಿ ಕ್ಲಬ್ ಅಂತರರಾಷ್ಟ್ರೀಯ ಸಂಸ್ಥೆಯಾಗಿದೆ. ಪೊಲಿಯೋ ನಿರ್ಮೂಲನೆಯಲ್ಲಿ ಬಹುಮುಖ್ಯ ಪಾತ್ರ ವಹಿಸಿದೆ’ ಎಂದು ಹೇಳಿದರು.

ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿ ಕಾರ್ಯದರ್ಶಿ ನಿತೇಶಕುಮಾರ ಬಿರಾದಾರ ಮಾತನಾಡಿ, ‘ವಿದ್ಯಾರ್ಥಿಗಳು ಸಮಯದ ಸದುಪಯೋಗ ಪಡೆದುಕೊಳ್ಳಬೇಕು. ಸೌಕರ್ಯಗಳನ್ನು ಬಳಸಿಕೊಂಡು ಶೈಕ್ಷಣಿಕ ಸಾಧನೆ ಮಾಡಬೇಕು’ ಎಂದು ಸಲಹೆ ಮಾಡಿದರು.

ಕ್ಲಬ್ ಮಾಜಿ ಅಧ್ಯಕ್ಷ ಚೇತನ ಮೇಗೂರ, ನಿತಿನ್ ಕರ್ಪೂರ, ಸಚ್ಚಿದಾನಂದ ಚಿದ್ರೆ, ಫರ್ದಿನ್ ಮುಲ್ತಾನಿ, ಸತೀಶ ಸ್ವಾಮಿ, ಸುಧೀಂದ್ರ ಸಿಂಧೋಲ, ಶಾಲೆಯ ಮುಖ್ಯ ಶಿಕ್ಷಕಿ ರಾಜಶ್ರೀ ಬಿರಾದಾರ ಉಪಸ್ಥಿತರಿದ್ದರು. ಶಿಕ್ಷಕ ಪರಮೇಶ್ವರ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT