ಸೋಮವಾರ, ಮೇ 23, 2022
28 °C
ಅಯೋಧ್ಯೆಯಲ್ಲಿ ನೂತನ ರಾಮ ಮಂದಿರ ನಿರ್ಮಾಣ

ಕೊಟರಕಿ ಪರಿವಾರದಿಂದ ₹5 ಲಕ್ಷ ದೇಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ರಾಮ ಮಂದಿರಕ್ಕೆ ಇಲ್ಲಿಯ ಕೊಟರಕಿ ಪರಿವಾರ ₹5 ಲಕ್ಷ ದೇಣಿಗೆ ನೀಡಿದೆ.

ಕೊಟರಕಿ ಕನ್‍ಸ್ಟ್ರಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಅಧ್ಯಕ್ಷ ಶಂಕರರಾವ್ ಕೊಟರಕಿ ಅವರು ನಗರದಲ್ಲಿ
ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ ಅವರಿಗೆ ದೇಣಿಗೆ ಮೊತ್ತದ ಚೆಕ್ ಹಸ್ತಾಂತರಿಸಿದರು.

‘ಕೊಟರಕಿ ಪರಿವಾರ ಹಿಂದಿನಿಂದಲೂ ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಗಳಿಗೆ ಉದಾರ ಮನಸ್ಸಿನಿಂದ ದೇಣಿಗೆ ಕೊಡುತ್ತ ಬಂದಿದೆ. ರಾಮ ಮಂದಿರ ನಿರ್ಮಾಣದ ಪವಿತ್ರ ಕಾರ್ಯಕ್ಕೆ ದೊಡ್ಡ ಮೊತ್ತದ ದೇಣಿಗೆ ನೀಡಿರುವುದು ಪ್ರಶಂಸನೀಯ’ ಎಂದು ಮುಖಂಡ ಪ್ರಕಾಶ ಟೊಣ್ಣೆ ಹೇಳಿದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಣಮಂತರಾವ್ ಪಾಟೀಲ, ಸಂತೋಷ ಕೊಟರಕಿ, ಆನಂದ ಕೊಟರಕಿ, ಸಂಗಮೇಶ ಕೊಟರಕಿ, ಗಜಾನನ ಪೋಲಕವಾರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು