ಸರ್ಕಾರಿ ಶಾಲೆ ಮುಚ್ಚದಿರಲು ಒತ್ತಾಯ

7

ಸರ್ಕಾರಿ ಶಾಲೆ ಮುಚ್ಚದಿರಲು ಒತ್ತಾಯ

Published:
Updated:
Deccan Herald

ಬೀದರ್: ವಿಲೀನದ ಹೆಸರಿನಲ್ಲಿ ರಾಜ್ಯದಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಬಾರದು ಎಂದು ಜಯ ಕರ್ನಾಟಕ ಸಂಘಟನೆ ಒತ್ತಾಯಿಸಿದೆ.

ರಾಜ್ಯ ಘಟಕದ ಅಧ್ಯಕ್ಷ ಆರ್. ಚಂದ್ರಪ್ಪ ಅವರ ನೇತೃತ್ವದಲ್ಲಿ ಸಂಘಟನೆಯ ಪದಾಧಿಕಾರಿಗಳು ನಗರದಲ್ಲಿ ನಿಯೋಗದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿದರು.

ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಸೌಕರ್ಯ, ಬೋಧಕ ಸಿಬ್ಬಂದಿಯನ್ನು ಒದಗಿಸಿ ಗುಣಮಟ್ಟದ ಶಿಕ್ಷಣ ನೀಡಿದರೆ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದರು.

ಒಬ್ಬ ವಿದ್ಯಾರ್ಥಿ ಇದ್ದರೂ ಸರ್ಕಾರಿ ಶಾಲೆಯನ್ನು ಮುಚ್ಚದೆ ಮುಂದುವರಿಸಬೇಕು. ರಾಜ್ಯದಲ್ಲಿ 14,347 ಸರ್ಕಾರಿ ಶಾಲೆಗಳನ್ನು ವಿಲಿನಗೊಳಿಸುವುದನ್ನು ಕೈಬಿಡಬೇಕು. ಇಲ್ಲದಿದ್ದರೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ರಾಜ್ಯ ಘಟಕದ ಕಾರ್ಯಾಧ್ಯಕ್ಷ ಅಣ್ಣಪ್ಪ ಓಲೇಕಾರ, ಪ್ರಧಾನ ಕಾರ್ಯದರ್ಶಿ ಎಚ್. ರಾಮಚಂದ್ರಯ್ಯ, ಜಿಲ್ಲಾ ಘಟಕದ ಅಧ್ಯಕ್ಷ ಆನಂದ ಘಂಟಿ, ಕಾರ್ಯಾಧ್ಯಕ್ಷ ಡಿ.ಕೆ. ಸಂಗಮೇಶ, ಪ್ರಧಾನ ಕಾರ್ಯದರ್ಶಿ ಅರವಿಂದ ಕಾರಬಾರಿ, ಹೈ.ಕ ಕಾರ್ಯದರ್ಶಿ ನವೀನ್ ನಿಯೋಗದಲ್ಲಿ ಇದ್ದರು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !