ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವರದಕ್ಷಿಣೆ ಕಿರುಕುಳ: ಮಹಿಳೆ ಆತ್ಮಹತ್ಯೆ

Published 10 ಜುಲೈ 2024, 16:32 IST
Last Updated 10 ಜುಲೈ 2024, 16:32 IST
ಅಕ್ಷರ ಗಾತ್ರ

ಹುಮನಾಬಾದ್: ತಾಲ್ಲೂಕಿನ ಘೋಡವಾಡಿ ಗ್ರಾಮದಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಸಾನಿಯಾ (29) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದೇ ವರ್ಷ ಫೆಬ್ರುವರಿ ತಿಂಗಳಲ್ಲಿ ಘೋಡವಾಡಿ ಗ್ರಾಮದ ಇಸ್ಮಾಯಿಲ್ ಎನ್ನುವವರ ಜೊತೆ ಸಾನಿಯಾ ಅವರ ವಿವಾಹವಾಗಿತ್ತು. ಬಳಿಕ ಪತ್ನಿಯನ್ನು ಹೈದರಾಬಾದ್‌ನ ತಮ್ಮ ಮನೆಗೆ ಕೆರೆದುಕೊಂಡು ಹೋಗಿ 3 ದಿನಗಳಲ್ಲೇ ವರದಕ್ಷಿಣೆ ತರುವಂತೆ ಪೀಡಿಸಿ ತವರು ಮನೆಯಲ್ಲಿ ಬಿಟ್ಟು ಹೋಗಿದ್ದ. ಅಲ್ಲದೆ ನಿತ್ಯ ಕರೆ ಮಾಡಿ ಹಣ ತೆಗೆದುಕೊಂಡು ಬಾ ಇಲ್ಲದಿದ್ದರೆ ನಾನು ಬೇರೆ ಮದುವೆ ಆಗುತ್ತೇನೆ ಎಂದು ಪೀಡಿಸುತ್ತಿದ್ದ. ಇಸ್ಮಾಯಿಲ್ ತಂದೆ ಮಹಮದ್ ಹಯತ್, ತಾಯಿ ರುಖಿಯಾ ಅವರು ಜು.8ರಂದು ನನ್ನ ಮನೆಗೆ ಬಂದು ನನ್ನ ಮಗಳು ಸಾನಿಯಾಗೆ ವರದಕ್ಷಿಣೆ ತೆಗೆದುಕೊಂಡು ಬಂದರೆ ಕರೆದುಕೊಂಡು ಹೋಗುತ್ತೇವೆ. ಇಲ್ಲದಿದ್ದರೆ ನನ್ನ ಮಗನಿಗೆ ಬೇರೆ ಮದುವೆ ಮಾಡುತ್ತೇವೆ ಎಂದು ಮಾನಸಿಕ ಕಿರುಕುಳ ನೀಡಿದ್ದರಿಂದ ಬೇಸತ್ತು ಜು.9ರಂದು ಮುಂಜಾನೆ 10 ಗಂಟೆ ಸುಮಾರಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾಳೆ ಎಂದು ಮೃತ ಮಹಿಳೆಯ ತಂದೆ ತಾಜೋದ್ದಿನ್ ದೂರಿದ್ದಾರೆ.

ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT