ಬೀದರ್: ಅಂಬೇಡ್ಕರ್ ಸ್ವಾಭಿಮಾನ ಸಂಘದ ವತಿಯಿಂದ ಇಲ್ಲಿಯ ವಿದ್ಯಾನಗರ ಕಾಲೊನಿಯ ಜೀಜಾಮಾತಾ ಶಿಕ್ಷಣ ಕೇಂದ್ರದಲ್ಲಿ ಆಯೋಜಿಸಿದ್ದ ಡಾ. ಅಂಬೇಡ್ಕರ್ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಸಂಘದ ಅಧ್ಯಕ್ಷ ಸಚಿನ್ ಶಿಂಧೆ ಅವರು ಜೀಜಾಮಾತಾ ಕನ್ಯಾ ಪ್ರೌಢಶಾಲೆಯ ಮುಖ್ಯಶಿಕ್ಷಕ ಪರಮೇಶ್ವರ ಬಿರಾದಾರ, ಮುಖ್ಯಶಿಕ್ಷಕ ರಮೇಶ ಬಿರಾದಾರ, ಸಹ ಶಿಕ್ಷಕರಾದ ಆನಂದ ಜಾಧವ್, ತಾನಾಜಿ ನಿರಗುಡೆ, ಅರ್ಜುನ ಧೂಳೆ, ಬಸವರಾಜ ಡಿ.ಆರ್, ಕುಮಾರಸ್ವಾಮಿ ಹಾಗೂ ಅನಂತ ಕುಲಕರ್ಣಿ ಅವರನ್ನು ಸನ್ಮಾನಿಸಿ ಪ್ರೋತ್ಸಾಹಿಸಿದರು.
ಡಾ. ಅಂಬೇಡ್ಕರ್ ಅವರು ಶಿಕ್ಷಣದಿಂದಲೇ ಸಮಾಜದ ಉನ್ನತಿ ಸಾಧ್ಯ ಎಂದು ಪ್ರತಿಪಾದಿಸಿದ್ದರು. ಹೀಗಾಗಿ ಅವರ ಜನ್ಮದಿನದ ಪ್ರಯುಕ್ತ ಮಕ್ಕಳಿಗೆ ಅಕ್ಷರ ಜ್ಞಾನ ಕೊಡುತ್ತಿರುವ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಗಿದೆ ಎಂದು ಸಚಿನ್ ಶಿಂಧೆ ತಿಳಿಸಿದರು.