ಸೋಮವಾರ, ಜನವರಿ 18, 2021
15 °C

ಡಾ.ಕಾವ್ಯಕಿಶೋರ್‌ಗೆ ಅತ್ಯುತ್ತಮ ಶೈಕ್ಷಣಿಕ ಸಲಹೆಗಾರ ಪ್ರಶಸ್ತಿ ಪ್ರದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಔರಾದ್: ಪಟ್ಟಣದ ನಿವೃತ್ತ ಶಿಕ್ಷಕ ಬಸವಣಪ್ಪ ಪಡಂಪಳ್ಳೆ ಅವರ ಪುತ್ರ ಬೆಂಗಳೂರಿನ ಆರ್.ವಿ. ಕಾಲೇಜಿನ
ಡಾ. ಕ್ಯಾವ್ಯಕಿಶೋರ್ ಅವರಿಗೆ ಪ್ರಸಕ್ತ ಸಾಲಿನ ಅತ್ಯುತ್ತಮ ಶೈಕ್ಷಣಿಕ ಸಲಹೆಗಾರ ಪ್ರಶಸ್ತಿ ಲಭಿಸಿದೆ.

ರಾಷ್ಟ್ರೀಯ ಯುಥ್‌ ಎಫರ್ಟ್‌ ಫಾರ್ ಸೂಸೈಟಿಯವರು ಶೈಕ್ಷಣಿಕ ಮತ್ತು ಸಂಶೋಧನೆ ವಿಭಾಗದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ನೀಡ ಲಾಗುವ ಈ ಪ್ರಶಸ್ತಿಗೆ ಕರ್ನಾಟಕದಿಂದ ಕಾವ್ಯಕಿಶೋರ ಆಯ್ಕೆಯಾಗಿದ್ದಾರೆ.

ಕಳೆದ 10 ವರ್ಷಗಳಿಂದ ಬೆಂಗಳೂರಿನ ಆರ್. ವಿ. ಕಾಲೇಜಿನಲ್ಲಿ ಶಿಕ್ಷಣ ಶಾಸ್ತ್ರದ ಉಪನ್ಯಾಸಕರಾಗಿ ಹಾಗೂ ಬೆಂಗಳೂರು ವಿಶ್ವವಿದ್ಯಾಲಯ ಸಂಶೋಧಕ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶೈಕ್ಷಣಿಕ ಮತ್ತು ಮನೋವಿಜ್ಞಾನಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಪುಸ್ತಕಗಳನ್ನು ಹೊರ ತಂದಿದ್ದಾರೆ. ಪುತ್ರನ ಈ ಸಾಧನೆಗೆ ತಾಯಿ ನಿವೃತ್ತ ಮುಖ್ಯ ಶಿಕ್ಷಕಿ ಮಹಾದೇವಿ ಪಡಂಪಳ್ಳೆ ಸಂತಸ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು