ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಂದು ಲಕ್ಷ ಶಸ್ತ್ರಚಿಕಿತ್ಸೆ: ಡಾ.ಸಂಗೀತಾ ಹುಲಸೂರೆ ಅವರಿಗೆ ಅಭಿನಂದನೆ

Last Updated 9 ಜುಲೈ 2021, 2:37 IST
ಅಕ್ಷರ ಗಾತ್ರ

ಹುಮನಾಬಾದ್: ‘ಸತತ 25 ವರ್ಷಗಳಿಂದ ಬೀದರ್‌ ಜಿಲ್ಲೆ ಮತ್ತು ಗ್ರಾಮೀಣ ಆರೋಗ್ಯ ಕೇಂದ್ರಗಳಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಕುಟುಂಬ ಕಲ್ಯಾಣ ಶಸ್ತ್ರ ಚಿಕಿತ್ಸೆಯನ್ನು ಡಾ.ಸಂಗೀತಾ ಹುಲಸೂರೆ ಅವರು ಕೈಗೊಂಡಿರುವುದು ಶ್ಲಾಘನೀಯವಾಗಿದೆ’ ಎಂದು ಆರೋಗ್ಯ ಇಲಾಖೆಯ ಉಪ ನಿರ್ದೇಶಕಿ ಡಾ.ಚಂದ್ರಿಕಾ ತಿಳಿಸಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚಾರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ವಿಪತ್ತಿನಲ್ಲೂ ಕುಟುಂಬ ಯೋಜನೆ ಸೇವೆ, ಸ್ವಾವಲಂಬಿ ರಾಷ್ಟ್ರ ಮತ್ತು ಕುಟುಂಬಕ್ಕೆ ನಾಂದಿ ಎಂಬ ಘೋಷವಾಕ್ಯದೊಂದಿಗೆ ಈ ವರ್ಷ ವಿಶ್ವ ಜನಸಂಖ್ಯಾ ದಿನವನ್ನು ಆಚರಣೆ ಮಾಡಲಾಗುತ್ತಿದೆ’ ಎಂದು ಅವರು ತಿಳಿಸಿದರು.

ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಿವಶಂಕರ ಬಿ. ಮಾತನಾಡಿ, ಕುಟುಂಬ ಕಲ್ಯಾಣ ವಿವಿಧ ವಿಧಾನಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಸೂಚಿಸಿದರು.

ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ನಾಗನಾಥ ಹುಲಸೂರೆ, ಡಾ.ವಿ.ಬಿ.ಲಕ್ಕಾ, ಡಾ. ದಿಲೀಪ್ ಡೋಂಗ್ರೆ, ಡಾ. ವಿಶ್ವ ಸೈನೀರ್, ಡಾ. ರೋಹಿತ್ ರಘೋಜಿ, ಸುವರ್ಣಕುಮಾರಿ ಇದ್ದರು.

ಶಿವಕುಮಾರ ಕಂಪ್ಲಿ ಸ್ವಾಗತಿಸಿದರು. ಗೀತಾರೆಡ್ಡಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT