ಶುಕ್ರವಾರ, ಏಪ್ರಿಲ್ 16, 2021
30 °C

ಬೀದರ್: 4ರಿಂದ 7ರವರೆಗೆ ನಾಟಕೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಜಿಲ್ಲಾ ಜಾನಪದ ಕಲಾವಿದರ ಬಳಗದ ವತಿಯಿಂದ ಮಾರ್ಚ್ 4ರಿಂದ 7ರ ವರೆಗೆ ನಗರದ ಡಾ.ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗ ಮಂದಿರದಲ್ಲಿ ನಾಟಕೋತ್ಸವ ಏರ್ಪಡಿಸಲಾಗಿದೆ ಎಂದು ಅಖಿಲ ಕರ್ನಾಟಕ ಕಲಾವಿದರ ಒಕ್ಕೂಟದ ಜಿಲ್ಲಾ ಅಧ್ಯಕ್ಷ ವಿಜಯಕುಮಾರ ಸೋನಾರೆ ತಿಳಿಸಿದ್ದಾರೆ.

ನಾಲ್ಕು ದಿನಗಳವರೆಗೆ ಸಾಮಾಜಿಕ, ಧಾರ್ಮಿಕ, ಐತಿಹಾಸಿಕ, ಪೌರಾಣಿಕ ನಾಟಕಗಳ ಪ್ರದರ್ಶನ ನಡೆಯಲಿದೆ. ಶಿವಮೊಗ್ಗ ಜಿಲ್ಲೆಯ ಸಾಣೇಹಳ್ಳಿಯ ಶಿವ ಸಂಚಾರ ತಂಡದ ಕಲಾವಿದರು ‘ಜೀವ ಇದ್ದರೆ ಜೀವನ’, ಶರಣ ಡೋಹರ ಕಕ್ಕಯ್ಯ, ಬಳ್ಳಾರಿ ಜಿಲ್ಲೆಯ ಪುರುಷೋತ್ತಮ ಹಂದ್ಯಾಳ ತಂಡವರು ‘ದನ ಕಾಯುವರ ದೊಡ್ಡಾಟ’ ಮತ್ತು ‘ಮುತ್ಯಾನ ಬಬಲಾದ, ಶೀ ಚನ್ನವೀರೇಶ್ವರ ನಾಟ್ಯ ಸಂಘದವರು ‘ರತ್ನಮಾಂಗಲ್ಯ’ ನಾಟಕ ಪ್ರದರ್ಶಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಬಿ. ಮಂಜಮ್ಮ ಜೋಗತಿ ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು