ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ನೆರವು

ಪಶುಮೇಳದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ
Last Updated 8 ಫೆಬ್ರುವರಿ 2020, 9:44 IST
ಅಕ್ಷರ ಗಾತ್ರ

ಬೀದರ್: ‘ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಅಗತ್ಯ ಹಣಕಾಸಿನ ನೆರವು ಒದಗಿಸಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಭರವಸೆ ನೀಡಿದರು.

ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಿರುವ ಮೂರು ದಿನಗಳ ರಾಜ್ಯಮಟ್ಟದ ಪಶು ಮೇಳಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.

‘ಶಾಸಕ ಬಂಡೆಪ್ಪ ಕಾಶೆಂಪೂರ್‌ ಅವರು ಕುಡಿಯುವ ನೀರಿನ ಸಮಸ್ಯೆಯನ್ನು ನನ್ನ ಗಮನಕ್ಕೆ ತಂದಿದ್ದಾರೆ. ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಹೆಚ್ಚು ಗಮನ ವಹಿಸಿ ಕಾರ್ಯನಿರ್ವಹಿಸಬೇಕು’ ಎಂದು ಸೂಚಿಸಿದರು.

‘ಗ್ರಾಮೀಣ ಪ್ರದೇಶದ ಆರ್ಥಿಕಾಭಿವೃದ್ಧಿಯಲ್ಲಿ ಪಶು ಸಂಗೋಪನೆ ಮಹತ್ವದ ಪಾತ್ರವನ್ನು ವಹಿಸುತ್ತಿದೆ. ರಾಜ್ಯದ ಕೃಷಿ ಜೆಡಿಪಿಯಲ್ಲಿ ಪಶು ಸಂಗೋಪನೆ ಪಾಲು ಶೇಕಡ 20.03ರಷ್ಟು ಇದೆ. ಇತ್ತೀಚಿನ ದಿನಗಳಲ್ಲಿ ಹವಾಮಾನ ಪರಿಸ್ಥಿತಿ ಬದಲಾಗುತ್ತಿದೆ. ರೈತರು ಕೃಷಿಯ ಜತೆಗೆ ಪಶು ಸಂಗೋಪನೆಯಲ್ಲಿ ತೊಡಿಸಿಕೊಂಡು ಆರ್ಥಿಕ ಪ್ರಗತಿ ಸಾಧಿಸಬೇಕು’ ಎಂದು ಸಲಹೆ ನೀಡಿದರು.

‘ರಾಜ್ಯದ 8.80 ಲಕ್ಷ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ ಹಾಲಿಗೆ ₹ 5 ರಂತೆ ಪ್ರೋತ್ಸಾಹಧನ ನೀಡಲಾಗುತ್ತಿದೆ’ ಎಂದು ತಿಳಿಸಿದರು.

ಶಾಸಕ ಬಂಡೆಪ್ಪ ಕಾಶೆಂಪೂರ್ ಅಧ್ಯಕ್ಷತೆ ವಹಿಸಿದ್ದರು.ಯದಲಾಪೂರ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀಬಾಯಿ ತುಂಗಾ, ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ಅಧ್ಯಕ್ಷ ಡಿ.ಕೆ.ಕಾಂತರಾಜು, ಸಹಕಾರ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಸಂಘಗಳ ಮಹಾಮಂಡಳ ನಿಯಮಿತದ ಅಧ್ಯಕ್ಷ ಪಂಡಿತರಾವ್ ಚಿದ್ರಿ, ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿ ಎ.ಬಿ.ಇಬ್ರಾಹಿಂ, ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಎಚ್.ಡಿ.ನಾರಾಯಣಸ್ವಾಮಿ, ಪಶು ಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಆಯುಕ್ತ ಎಸ್.ಆರ್.ನಟೇಶ್, ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್, ಬೆಂಗಳೂರಿನ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಜಿ.ಸತೀಶ್, ಪಶು ಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ನಿರ್ದೇಶಕ ಎಂ.ಟಿ.ಮಂಜುನಾಥ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT