ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇದ್ದೂ ಇಲ್ಲದಂತಿರುವ ಶುದ್ಧ ನೀರಿನ ಘಟಕ

Last Updated 10 ನವೆಂಬರ್ 2021, 7:28 IST
ಅಕ್ಷರ ಗಾತ್ರ

ಔರಾದ್: ತೆಲಂಗಾಣ ಗಡಿಗೆ ಹೊಂದಿಕೊಂಡಿರುವ ತಾಲ್ಲೂಕಿನ ಜಮಗಿ ಗ್ರಾಮದ ಜನ ಶುದ್ಧ ಕುಡಿಯುವ ನೀರಿನಿಂದ ವಂಚಿತರಾಗಿದ್ದಾರೆ.

ಗ್ರಾಮ ಪಂಚಾಯಿತಿ ಕೇಂದ್ರವಾಗಿರುವ ಇಲ್ಲಿಯ ಜನ ಮೂಲಸೌಲಭ್ಯದ ಕೊರತೆ ಎದುರಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಜನರಿಗೆ ಶುದ್ದ ನೀರು ಪೂರೈಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಇಲ್ಲಿ ವಿಫಲವಾಗಿದೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಅಳವಡಿಸಲಾದ ಎರಡೂ ನೀರಿನ ಘಟಕಗಳು ಹಾಳಾಗಿವೆ.

ನಮ್ಮ ಊರಿಗೆ ಸಮೀಪ 4 ಕಿ.ಮೀ. ದೂರದಲ್ಲಿರುವ ತೆಲಂಗಾಣ ಗ್ರಾಮದ ಜನರಿಗೆ ಅಲ್ಲಿಯ ಸರ್ಕಾರ ಸಾಕಷ್ಟು ಸೌಲಭ್ಯ ಕಲ್ಪಿಸಿದೆ. ಆದರೆ ನಮ್ಮವರು ಮಾತ್ರ ನಮಗೆ ವಂಚನೆ ಮಾಡುತ್ತಾ ಬಂದಿದ್ದಾರೆ ಗಡಿ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾವು ಪ್ರತಿಯೊಂದಕ್ಕೂ ಹೋಬಳಿ ಇಲ್ಲವೇ ತಾಲ್ಲೂಕು ಕೇಂದ್ರಕ್ಕೆ ಹೋಗಬೇಕು. ಒಂದು ಪಹಣಿ ಬೇಕಾದರೂ 16 ಕಿ.ಮೀ. ದೂರದ ಸಂತಪುರ ಹೋಬಳಿ ಕೇಂದ್ರಕ್ಕೆ ಹೋಗಬೇಕು. ಹೋಗುವುದು ಒಂದೆಡೆ ಇರಲಿ ಅಲ್ಲಿಗೆ ಹೋಗಲು ಸರಿಯಾದ ರಸ್ತೆ ಕೂಡ ಇಲ್ಲ. ಬಸ್ ಸೌಲಭ್ಯವೂ ಇಲ್ಲ. ಇದರಿಂದಾಗಿ ಗಡಿ ಭಾಗದ ಜನ ತೀವ್ರ ಸಮಸ್ಯೆಯಾಗಿದೆ ಎಂದು ಜಮಗಿ ಹಾಗೂ ಸುತ್ತಲಿನ ಗ್ರಾಮಗಳ ಜನ ಹೇಳುತ್ತಾರೆ.

ನಮ್ಮ ಊರಿಗೆ ನೆಮ್ಮದಿ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರದ ಅವಶ್ಯತೆ ಬಹಳ ಇದೆ. ಈ ಕುರಿತು ಅನೇಕ ಸಲ ಬೇಡಿಕೆ ಸಲ್ಲಿಸಿದ್ದೇವೆ. ಆದರೂ ಸಮಸ್ಯೆಗೆ ಸ್ಪಂದನೆ ಸಿಕ್ಕಿಲ್ಲ ಎಂದು ಗ್ರಾಮದಜನರು ಅಸಮಾಧಾನ ತೋಡಿಕೊಂಡಿದ್ದಾರೆ.

ಇದು ಗಡಿ ಪ್ರದೇಶವಾಗಿರುವುದರಿಂದ ಇಲ್ಲಿ ಕಳ್ಳತನ ಪ್ರಕರಣ ಜಾಸ್ತಿಯಾಗುತ್ತವೆ. ಅಗಾಗ ಗಾಂಜಾ ಅಕ್ರಮ ಮಾರಾಟ ಪ್ರಕರಣ ಪತ್ತೆಯಾಗುತ್ತಲೇ ಇರುತ್ತವೆ. ಇಲ್ಲಿ ಪೊಲೀಸ್ ಠಾಣೆ ಮಂಜೂರು ಮಾಡುವ ಬೇಡಿಕೆ ಹಲವು ವರ್ಷಗಳಿಂದ ಇದೆ. ಈ ನಿಟ್ಟಿನಲ್ಲೂ ಸರ್ಕಾರ ಕಾಳಜಿ ವಹಿಸಬೇಕು ಎಂದು ಕಿಸಾನ್ ಸಭಾ ತಾಲ್ಲೂಕು ಅಧ್ಯಕ್ಷ ಅಹೆಮ್ಮದ್ ಜಮಗಿ ಮನವಿ ಮಾಡಿದ್ದಾರೆ.

*ಕೆಲ ಪಂಚಾಯಿತಿಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೆಲಸ ಮಾಡದಿರುವ ಮಾಹಿತಿ ಬಂದಿದೆ. ಈಗಾಗಲೇ ಕೆಲ ಕಡೆ ರಿಪೇರಿ ಮಾಡಲಾಗಿದೆ. ಜಮಗಿಯಲ್ಲೂ ಆದಷ್ಟು ಬೇಗ ರಿಪೇರಿ ಮಾಡಿ ಜನರಿಗೆ ಅನುಕೂಲ ಮಾಡಿಕೊಡಲಾಗುವುದು
ಸುಭಾಷ, ಎಂಜಿನಿಯರ್, ಜಿ.ಪಂ. ಕುಡಿಯುವ ನೀರು ಸರಬರಾಜು ವಿಭಾಗ ಔರಾದ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT