ಬೀದರ್: ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ವತಿಯಿಂದ ಇಲ್ಲಿಯ ಗ್ಲೊಬಲ್ ಸೈನಿಕ ಅಕಾಡೆಮಿಯಲ್ಲಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಅಭ್ಯರ್ಥಿಗಳಿಗೆ ಸಶಸ್ತ್ರ ಪಡೆಗಳು ಹಾಗೂ ಅರೆಸೇನಾ ಪಡೆಗಳ ಪೂರ್ವಸಿದ್ಧತಾ ತರಬೇತಿಗೆ ಭಾನುವಾರ ಚಾಲನೆ ನೀಡಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ತರಬೇತಿಗೆ ಚಾಲನೆ ನೀಡಿದರು. ಇದಕ್ಕೂ ಮೊದಲು ಸಚಿವರು ಅಮರ್ ಜವಾನ್ ಸ್ಮಾರಕಕ್ಕೆ ಪುಷ್ಪಗುಚ್ಛವಿರಿಸಿ ಗೌರವ ಸಲ್ಲಿಸಿದರು.

ಬೀದರ್ ವಾಯುಪಡೆ ತರಬೇತಿ ಕೇಂದ್ರದ ಏರ್ ಕಮಾಡೋರ್ ಸಮೀರ್ ಸೋಂಧಿ, ಚೀಫ್ ಆಪರೇಟಿಂಗ್ ಆಫಿಸರ್ ಅಜೀತ್ ಕುಲಕರ್ಣಿ ಪ್ರಶಿಕ್ಷಣಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಶಾಸಕ ರಹೀಂ ಖಾನ್, ವಿಧಾನ ಪರಿಷತ್ ಸದಸ್ಯ ರಘುನಾಥ್ ಮಲ್ಕಾಪುರೆ, ಬುಡಾ ಅಧ್ಯಕ್ಷ ಬಾಬು ವಾಲಿ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಪಾಟೀಲ ಸೋಲಪುರ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ನಿರ್ದೇಶಕ ರೇವಣಸಿದ್ದಪ್ಪ ಜಲಾದೆ ಹಾಗೂ ಗ್ಲೊಬಲ್ ಸೈನಿಕ ಅಕಾಡೆಮಿ ಅಧ್ಯಕ್ಷ ಕರ್ನಲ್ ಶರಣಪ್ಪ ಸಿಕೇನಪುರೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.