ಶನಿವಾರ, ಮಾರ್ಚ್ 25, 2023
22 °C

ಸಿಸಿ ರಸ್ತೆ ಕಾಮಗಾರಿಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜನವಾಡ: ಬೀದರ್ ತಾಲ್ಲೂಕಿನ ಕುತ್ತಾಬಾದ್ ಗ್ರಾಮದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ನಿರ್ಮಿತಿ ಕೇಂದ್ರದ ಸಹಯೋಗದಲ್ಲಿ ₹ 50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಬೀದರ್ ದಕ್ಷಿಣ ಶಾಸಕ ಬಂಡೆಪ್ಪ ಕಾಶೆಂಪೂರ ಚಾಲನೆ ನೀಡಿದರು.

ಗ್ರಾಮದಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಗ್ರಾಮಸ್ಥರು ಗಮನಕ್ಕೆ ತಂದಿರುವ ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ನಿರ್ಮಿತಿ ಕೇಂದ್ರದ ಅಧಿಕಾರಿ ಮಠಪತಿ, ಲಕ್ಷ್ಮೀಬಾಯಿ ತುಂಗಾ, ಅನಿತಾ ಪಂಡಿತ, ಮಲ್ಲಯ್ಯ ಸ್ವಾಮಿ, ತೇಜಮ್ಮ, ಈಶ್ವರಪ್ಪ, ಘಾಳೆಪ್ಪ ತಮಗೊಂಡ, ತುಕಾರಾಮ ಬಾಲದೊಡ್ಡಿ, ಶಂಕರ ದಳಪತಿ, ಸುನೀಲಕುಮಾರ ಮೇಕ್ರೆ, ಅಶೋಕ ಕೋಟೆಭಾವಿ, ನಾಗಮ್ಮ, ಮಾರುತಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.