ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅನುಭವ ಮಂಟಪದಲ್ಲಿ ಪ್ರಜಾಪ್ರಭುತ್ವ ದಿನಾಚರಣೆಗೆ ಚಾಲನೆ: ಮಾನವ ಸರಪಳಿ ಒಗ್ಗಟ್ಟು

Published : 15 ಸೆಪ್ಟೆಂಬರ್ 2024, 5:14 IST
Last Updated : 15 ಸೆಪ್ಟೆಂಬರ್ 2024, 5:14 IST
ಫಾಲೋ ಮಾಡಿ
Comments

ಅನುಭವ ಮಂಟಪ (ಬಸವಕಲ್ಯಾಣ/ಬೀದರ್): ಹನ್ನೆರಡನೇ ಶತಮಾನದಲ್ಲಿ ಜಗತ್ತಿಗೆ ಮೊಟ್ಟ ಮೊದಲ ಬಾರಿಗೆ ಪ್ರಜಾಪ್ರಭುತ್ವದ ಪರಿಕಲ್ಪನೆ ಕೊಟ್ಟ ಅನುಭವ ಮಂಟಪದಿಂದ ಭಾನುವಾರ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಚಾಲನೆ ನೀಡಲಾಯಿತು.

ಅನುಭವ ಮಂಟಪದಿಂದ ರಾಜ್ಯದ ದಕ್ಷಿಣದ ತುದಿಯಲ್ಲಿರುವ ಚಾಮರಾಜನಗರದ ವರೆಗೆ ಮಾನವ ಸರಪಳಿ ನಿರ್ಮಿಸಿ, ಸ್ವಾತಂತ್ರ್ಯ, ಸಮಾನತೆ ಮತ್ತು ಭಾತೃತ್ವ, ಒಗ್ಗಟ್ಟಿನ ಮಂತ್ರ ಜಪಿಸಲಾಯಿತು. ಸಂವಿಧಾನದ ಪೀಠಿಕೆ ಓದುವುದರ ಮೂಲಕ ಅದರ ಬಗೆಗಿನ ಬದ್ಧತೆ ಪ್ರದರ್ಶಿಸಿದರು. ಮಾನವ ಸರಪಳಿಯುದ್ದಕ್ಕೂ ವಿವಿಧ ಶಾಲಾ, ಕಾಲೇಜಿನ ವಿದ್ಯಾರ್ಥಿಗಳು, ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಕಾರ್ಯಕರ್ತರು ತ್ರಿವರ್ಣ ಧ್ವಜ ಹಿಡಿದು ಘೋಷಣೆ ಕೂಗಿದರು. ಕೆಲವು ಮಕ್ಕಳು ತಾಯಿ ಭುವನೇಶ್ವರಿ ಹಾಗೂ ಭಾರತಾಂಬೆಯ ವೇಷ‌ ಧರಿಸಿ ಗಮನ ಸೆಳೆದರು.

ಇದಕ್ಕೂ ಮುನ್ನ ನಡೆದ ಕಾರ್ಯಕ್ರಮವನ್ನು ಪರಿಸರ,‌ಅರಣ್ಯ ಖಾತೆ ಸಚಿವ ಈಶ್ವರ ಬಿ. ಖಂಡ್ರೆ ಉದ್ಘಾಟಿಸಿದರು. ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು, ಭಾಲ್ಕಿ ಹಿರೇಮಠದ ಗುರುಬಸವ ಪಟ್ಟದ್ದೇವರು, ಪೌರಾಡಳಿತ ಸಚಿವ ರಹೀಂ ಖಾನ್, ಶಾಸಕ ಶರಣು ಸಲಗರ್, ವಿಧಾನ ಪರಿಷತ್‌ ಸದಸ್ಯ ಎಂ.ಜಿ. ಮುಳೆ, ಗ್ಯಾರಂಟಿ

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಕಾರ್ಯಕ್ರಮದ ರಾಜ್ಯ ನೋಡಲ್ ಅಧಿಕಾರಿ ಪ್ರವೀಣ್ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಡಿಸಿಎಫ್ ವಾನತಿ ಎಂ.ಎಂ., ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಹಾಜರಿದ್ದರು.

ಸಂವಿಧಾನದ ಆಶಯ ತಿಳಿಸಲು ಕಾರ್ಯಕ್ರಮ-ಸಚಿವ ಖಂಡ್ರೆ‌

ಗೌತಮ ಬುದ್ಧ, ವಿಶ್ವಗುರು ಬಸವಣ್ಣ, ಡಾ.ಬಿ.ಆರ್. ಅಂಬೇಡ್ಕರ್, ಮಹಾತ್ಮ ಗಾಂಧೀಜಿ, ಎಲ್ಲ ಸ್ವಾತಂತ್ರ್ಯ ಸೇನಾನಿಗಳು, ಲಿಂಗೈಕ್ಯ ಚನ್ನಬಸವ ಪಟ್ಟದ್ದೇವರ ಸ್ಮರಣೆಯೊಂದಿಗೆ ಮಾತು ಆರಂಭಿಸಿದ ಸಚಿವ ಈಶ್ವರ ಬಿ. ಖಂಡ್ರೆ,ಇಡೀ ಜಗತ್ತಿನಲ್ಲಿ ನಮ್ಮ ಸಂವಿಧಾನ ಬಹಳ ಶ್ರೇಷ್ಠವಾದುದು. ಈ ಸಂವಿಧಾನದ ಆಶಯಗಳು ಮುಂದಿನ ಭವಿಷ್ಯದ ಪೀಳಿಗೆಗೆ ಪರಿಚಯ ಮಾಡಿಕೊಡುವುದು. ಸಮಾನತೆ, ಸ್ವಾತಂತ್ರ್ಯ, ಭಾತೃತ್ವದ ವಿಚಾರಗಳ ಮೇಲೆ ನಮ್ಮ ಸಮಾಜ ರೂಪುಗೊಳ್ಳಬೇಕೆಂಬುದು ನಮ್ಮ ಸರ್ಕಾರದ ಆಶಯವಾಗಿದೆ ಎಂದರು.

ಸಾಮಾಜಿಕ ನ್ಯಾಯದ ಹರಿಕಾರ ಸಿಎಂ ಸಿದ್ದರಾಮಯ್ಯನವರು ಈ ಕಾರ್ಯಕ್ರಮವನ್ನು ಎಲ್ಲರೊಂದಿಗೆ ಚರ್ಚಿಸಿ ರೂಪಿಸಿದ್ದಾರೆ. ಜಗತ್ತಿನ ಪ್ರಪ್ರಥಮ ಸಂಸತ್ತು ಅನುಭವ ಮಂಟಪದಲ್ಲಿ ವಿಶ್ವಗುರು ಬಸವಣ್ಣನವರ ನೇತೃತ್ವದಲ್ಲಿ ಸಮಾಜೋ ಧಾರ್ಮಿಕ ಕ್ರಾಂತಿ ನಡೆದಿತ್ತು. ಸಮ ಸಮಾಜದ ನಿರ್ಮಾಣಕ್ಕೆ ಶರಣರು ಶ್ರಮಿಸಿದ್ದರು. ಅಸ್ಪೃಶ್ಯತೆ, ಜಾತೀಯತೆ,‌ಕಂದಾಚಾರದ ವಿರುದ್ದ ಹೋರಾಟ ನಡೆಸಿದ್ದರು. ಬಸವಾದಿ ಶರಣರ ಆದರ್ಶ ಗಳನ್ನು ಬಾಬಾ ಸಾಹೇಬರು ಸಂವಿಧಾನದಲ್ಲಿ ಅಳವಡಿಸಿಕೊಂಡು ಜಾರಿಗೆ ತಂದಿದ್ದಾರೆ. ಅನುಭವ ಮಂಟಪದಿಂದ ಚಾಮರಾಜನಗರದವರೆಗೆ ಮಾನವ ಸರಪಳಿ, ಬೀದರ್ ಜಿಲ್ಲೆಯಲ್ಲಿ 45 ಕಿ.ಮೀ ಮಾನವ ಸರಪಳಿ ನಿರ್ಮಿಸಲಾಗಿದೆ. ಬ್ರಿಟನ್ ಗಿಂತ ಮೊದಲೇ ಬಸವಕಲ್ಯಾಣದಲ್ಲಿ ಜಗತ್ತಿನ ಮೊದಲ ಸಂಸತ್ತು ನಿರ್ಮಿಸಲಾಗಿತ್ತು ಎಂದು ತಿಳಿಸಿದರು.

ಜಾತಿ ಜಾತಿಗಳ ನಡುವೆ, ಧರ್ಮ ಧರ್ಮಗಳ ನಡುವೆ ಬಿರುಕು, ದ್ವೇಷ ಬಿತ್ತುವ ಕೆಲಸ ಮಾಡಲಾಗುತ್ತಿದೆ. ಬಡವರ ಮೇಲೆ ಹೆಚ್ಚಿನ ಶೋಷಣೆಗಳಾಗುತ್ತಿವೆ. ಅದು ತಪ್ಪಬೇಕಾದರೆ ಸಂವಿಧಾನದ ಆಶಯಗಳು ಪೂರ್ಣ ಪ್ರಮಾಣದಲ್ಲಿ ಈಡೇರುವ ಅಗತ್ಯವಿದೆ ಎಂದು ಹೇಳಿದರು.

2025ರ ಡಿಸೆಂಬರ್ ನೊಳಗೆ ಅನುಭವ ಮಂಟಪದ ಕಾಮಗಾರಿ ಮುಗಿಸಿ ಲೋಕಾರ್ಪಣೆ ಗೊಳಿಸಲಾಗುವುದು. ಈ ರಾಷ್ಟ್ರ ದ ಏಕತೆ, ಸಮಗ್ರತೆ, ಅಖಂಡತೆಗಾಗಿ ನಮ್ಮ ಹಿರಿಯರು ತ್ಯಾಗ, ಬಲಿದಾನ ಮಾಡಿದ್ದಾರೆ. ಶ್ರೇಷ್ಠ ಸಂವಿಧಾನ ಸಿಕ್ಕಿದೆ. ನಾವೆಲ್ಲರೂ ಅದನ್ನು ಅನುಷ್ಠಾನಕ್ಕೆ ತರಲು ಶ್ರಮಿಸೋಣ ಎಂದರು.

ರಾಜ್ಯದಾದ್ಯಂತ ಈ ದಿನ ಹತ್ತು ಸಾವಿರ ಸಸಿಗಳನ್ನು ನೆಡಲಾಗುತ್ತಿದೆ. ಹಸಿರು ಹೊದಿಕೆ ಜಾಸ್ತಿ ಮಾಡೋಣ ಪ್ರಕೃತಿ ಸಂರಕ್ಷಿಸುವ ಸಂಕಲ್ಪ ಮಾಡಬೇಕಿದೆ. ಸಂವಿಧಾನ, ವಿವಿಧತೆಯಲ್ಲಿ ಏಕತೆಯಿಂದ ಸಾಮರಸ್ಯ, ಸಹೋದರತ್ವದ ತಳಹದಿ ಮೇಲೆ ಸು.ದರ ಸಮಾಜ ನಿರ್ಮಾಣ ಮಾಡೋಣ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT