ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುದಗೆ ಆಸ್ಪತ್ರೆಯಲ್ಲಿ ಐ.ವಿ.ಎಫ್ ಕೇಂದ್ರಕ್ಕೆ ಚಾಲನೆ

Last Updated 6 ಮಾರ್ಚ್ 2021, 14:32 IST
ಅಕ್ಷರ ಗಾತ್ರ

ಬೀದರ್: ನಗರದ ಗುದಗೆ ಮಲ್ಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಐ.ವಿ.ಎಫ್ (ಟೆಸ್ಟ್ ಟ್ಯೂಬ್ ಬೆಬಿ ಸೆಂಟರ್) ಕೇಂದ್ರಕ್ಕೆ ಚಾಲನೆ ದೊರೆತಿದೆ.

ಕೇಂದ್ರವನ್ನು ಉದ್ಘಾಟಿಸಿದ ಶಾಸಕ ಈಶ್ವರ ಖಂಡ್ರೆ ಮಾತನಾಡಿ, ಗುದಗೆ ಆಸ್ಪತ್ರೆಯು ಈ ಭಾಗದ ಸುಸಜ್ಜಿತ ಆಸ್ಪತ್ರೆಗಳಲ್ಲಿ ಒಂದಾಗಿದೆ. ಹಿರಿಯ ವೈದ್ಯ ಡಾ. ಚಂದ್ರಕಾಂತ ಗುದಗೆ ಅವರು ಈ ಭಾಗದ ರೋಗಿಗಳು ಚಿಕಿತ್ಸೆಗಾಗಿ ನೆರೆ ರಾಜ್ಯಗಳಿಗೆ ಹೋಗುವುದನ್ನು ತಪ್ಪಿಸಲು ಆಸ್ಪತ್ರೆಯಲ್ಲಿ ಎಲ್ಲ ಸೌಕರ್ಯಗಳನ್ನು ಕಲ್ಪಿಸಿದ್ದಾರೆ ಎಂದು ಹೇಳಿದರು.

ಆಸ್ಪತ್ರೆಯಲ್ಲಿ ಹೊಸದಾಗಿ ಆರಂಭಿಸಿರುವ ಐ.ವಿ.ಎಫ್ ಕೇಂದ್ರ ಬರುವ ದಿನಗಳಲ್ಲಿ ಜಿಲ್ಲೆಯನ್ನು ಬಂಜೇತನಮುಕ್ತಗೊಳಿಸಲು ನೆರವಾಗಲಿ ಎಂದು ಆಶಿಸಿದರು.

ಶಾಸಕರಾದ ಬಂಡೆಪ್ಪ ಕಾಶೆಂಪೂರ್, ರಾಜಶೇಖರ ಪಾಟೀಲ, ರಹೀಂಖಾನ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ, ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಚಂದ್ರಕಾಂತ ಗುದಗೆ ಮಾತನಾಡಿದರು. ಐ.ವಿ.ಎಫ್ ಕೇಂದ್ರದ ಮುಖ್ಯಸ್ಥೆ ಡಾ. ಶಾರದಾ ಗುದಗೆ ಚಿಕಿತ್ಸಾ ವಿಧಾನದ ಪರಿಚಯ ನೀಡಿದರು.

ಎನ್.ಬಿ. ರೆಡ್ಡಿ ಗುರೂಜಿ ಸಾನಿಧ್ಯ ವಹಿಸಿದ್ದರು. ಆಸ್ಪತ್ರೆಯ ನಿರ್ದೇಶಕ ನಂದಾ ಗುದಗೆ, ಡಾ. ನಿತಿನ್ ಗುದಗೆ, ಡಾ. ವಿಜಯಲಕ್ಷ್ಮಿ ಗುದಗೆ, ಡಾ. ಮಹೇಶ ತೊಂಡಾರೆ, ಡಾ. ವಿಶ್ವನಾಥ ಪಾಟೀಲ, ಡಾ. ಸಂಗಮೇಶ ತೊಂಡಾರೆ, ಡಾ. ನಾಗರಾಜ ಮಿತ್ರಾ, ಡಾ. ವೈಭವ ಭದಭದೆ, ವ್ಯವಸ್ಥಾಪಕ ಶ್ರೀಕಾಂತ ಸ್ವಾಮಿ ಸೋಲಪುರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT