ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ತಡೆಗೆ ಲಸಿಕೆ ಪಡೆಯಿರಿ: ಸಂಸದ ಭಗವಂತ ಖೂಬಾ

ಜಿಲ್ಲೆಯಲ್ಲಿ ಕೋವಿಡ್ ಲಸಿಕಾ ಮೇಳಕ್ಕೆ ಚಾಲನೆ
Last Updated 21 ಜೂನ್ 2021, 14:18 IST
ಅಕ್ಷರ ಗಾತ್ರ

ಬೀದರ್: ಕೋವಿಡ್ ತಡೆಗೆ ಪ್ರತಿಯೊಬ್ಬರೂ ಲಸಿಕೆ ಪಡೆಯಬೇಕು ಎಂದು ಸಂಸದ ಭಗವಂತ ಖೂಬಾ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ನಗರದ ಶಿವನಗರ ದಕ್ಷಿಣದ ಹನುಮಾನ ಮಂದಿರದಲ್ಲಿ ಸೋಮವಾರ ಕೋವಿಡ್ ಲಸಿಕಾ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಆಶ್ವಾಸನೆಯಂತೆ ದೇಶದಾದ್ಯಂತ ಬೃಹತ್ ಪ್ರಮಾಣದ ಕೋವಿಡ್ ಲಸಿಕಾ ಮೇಳಕ್ಕೆ ಚಾಲನೆ ಸಿಕ್ಕಿದೆ ಎಂದು ತಿಳಿಸಿದರು.

ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಕೋವಿಡ್ ಲಸಿಕಾ ಮೇಳ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ನುಡಿದರು.

ಮೇಳದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ. ಆರೋಗ್ಯ, ಕೋವಿಡ್ ಮಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳ ಲಸೀಕಾರಣ ನಡೆಯುತ್ತಿದೆ ಎಂದು ಹೇಳಿದರು.

ಕೋವಿಡ್ ಲಸಿಕಾ ಮೇಳದ ಯಶಸ್ಸಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿ ಕೂಡ ಶ್ರಮಿಸಲಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್ ತಿಳಿಸಿದರು.

ಮೇಳದಲ್ಲಿ ಕೋವ್ಯಾಕ್ಸಿನ್ ಲಸಿಕೆಯ ಮೊದಲ ಡೋಸ್ ಹಾಗೂ ಎರಡನೇ ಡೋಸ್ ಬಾಕಿ ಫಲಾನುಭವಿಗಳ ಲಸೀಕಾರಣ ನಡೆಯುತ್ತಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ 450 ಕೋವಿಡ್ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿ.ಜಿ.ರೆಡ್ಡಿ ತಿಳಿಸಿದರು.

ಮೇಳದ ಮೊದಲ ದಿನ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರಕಿದೆ. ಒಟ್ಟು 35,000 ಲಸಿಕೆಗಳು ಲಭ್ಯ ಇದ್ದು, ಈವರೆಗೆ 30,000 ಜನರಿಗೆ ಲಸಿಕೆ ಕೊಡಲಾಗಿದೆ ಎಂದು ಹೇಳಿದರು.

ಡಾ.ಮಾರ್ಥಂಡ್ ಕಾಶೆಂಪೂರಕರ್, ಡಾ. ರಾಜಶೇಖರ ಪಾಟೀಲ, ಜಿಲ್ಲಾಧಿಕಾರಿ ಕಚೇರಿಯ ಸತೀಶ ವಾಲೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT