ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದಿ ಬದಿ ವ್ಯಾಪಾರಿಗಳಿಗೆ ಲಸಿಕಾಕರಣಕ್ಕೆ ಚಾಲನೆ

Last Updated 27 ಮೇ 2021, 13:56 IST
ಅಕ್ಷರ ಗಾತ್ರ

ಬೀದರ್: ದುರ್ಬಲ ವರ್ಗದವರು ಎಂದು ಗುರುತಿಸಲಾದ ಬೀದಿ ಬದಿ ವ್ಯಾಪಾರಿಗಳು ಹಾಗೂ 18 ರಿಂದ 44 ವರ್ಷದ ಒಳಗಿನ ಇತರರಿಗೆ ಕೋವಿಡ್ ಲಸಿಕಾಕರಣಕ್ಕೆ ಶಾಸಕ ರಹೀಂಖಾನ್ ನಗರದ ಉಸ್ಮಾನ್‍ಗಂಜ್‍ನಲ್ಲಿ ಚಾಲನೆ ನೀಡಿದರು.

ಲಸಿಕಾಕರಣದಿಂದ ಕೋವಿಡ್ ಸೋಂಕಿನಿಂದ ರಕ್ಷಣೆ ಪಡೆಯಬಹುದು. ಹೀಗಾಗಿ ಎಲ್ಲರೂ ಲಸಿಕೆ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಆಸ್ಪತ್ರೆಗಳಲ್ಲಿ ಅಗತ್ಯ ಪ್ರಮಾಣದಲ್ಲಿ ಲಸಿಕೆಗಳು ಲಭ್ಯ ಇವೆ. ದುರ್ಬಲ ವರ್ಗದವರು ತಾವಿರುವ ಕಡೆಯಲ್ಲೇ ಲಸಿಕೆ ಪಡೆಯಲು ಬಯಸಿದರೆ ಅದಕ್ಕೂ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿವೆ. ಸೋಂಕು ಸೊನ್ನೆಗೆ ಬರುವವರೆಗೂ ಸಾರ್ವಜನಿಕರು ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದರು.

ಪೌರಾಯುಕ್ತ ರವೀಂದ್ರನಾಥ ಅಂಗಡಿ, ವೈದ್ಯಾಧಿಕಾರಿ ಡಾ. ಸೋಹೆಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT