ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದ ಕಾಮಗಾರಿಗೆ ಚಾಲನೆ

Last Updated 3 ಜುಲೈ 2022, 13:42 IST
ಅಕ್ಷರ ಗಾತ್ರ

ಬೀದರ್‌: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರಕ್ಕೆ ಸಂಸದರ ನಿಧಿಯಿಂದ ಅಗತ್ಯ ಹಣಕಾಸಿನ ನೆರವು ಒದಗಿಸಲಾಗುವುದು ಎಂದು ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹೇಳಿದರು.

ಬೀದರ್ ತಾಲ್ಲೂಕಿನ ಆಣದೂರಿನ ಹೊರವಲಯದಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಬೀದರ್ ಜಿಲ್ಲೆಯಲ್ಲಿ ಮಹಿಳಾ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರ ನಿರ್ಮಾಣವಾಗುತ್ತಿರುವುದು ಸಂತಸದ ವಿಷಯವಾಗಿದೆ. ಇದರಿಂದ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಶಾಸಕ ಬಂಡೆಪ್ಪ ಕಾಶೆಂಪೂರ್ ಮಾತನಾಡಿ, ಶಿಕ್ಷಣದಲ್ಲಿ ಆಧುನಿಕ ತಂತ್ರಜ್ಞಾನ ಬಳಕೆ ಮಾಡಬೇಕು. ಜಿಲ್ಲೆಗೆ ಮಹಿಳಾ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರ ತರುವ ನಿಟ್ಟಿನಲ್ಲಿ ಬಹಳಷ್ಟು ಶ್ರಮಿಸಲಾಗಿದೆ. ಜಿಲ್ಲಾಡಳಿತ ಮತ್ತು ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಕಾರದಿಂದ ಪ್ರಾದೇಶಿಕ ಕೇಂದ್ರಕ್ಕೆ ಭೂಮಿ ಲಭ್ಯವಾಗಿದೆ ಎಂದರು.

ಪ್ರಾದೇಶಿಕ ಕೇಂದ್ರ ಕೇವಲ ಶಿಕ್ಷಣದ ಪ್ರಮಾಣಪತ್ರ ಕೊಡುವ ಕೇಂದ್ರವಾಗಿರಬಾರದು. ಶಿಕ್ಷಣದಲ್ಲಿ ಹೊಸ ಬದಲಾವಣೆ ತರಲು ಪ್ರಯತ್ನಿಸಬೇಕು ಎಂದು ಹೇಳಿದರು.

ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಮಾತನಾಡಿ, ಮಹಿಳಾ ವಿವಿಯ ಹತ್ತೊಂಬತ್ತನೇ ವರ್ಷದ ಇತಿಹಾಸದಲ್ಲಿ ಇದೊಂದು ಐತಿಹಾಸಿಕ ಮೈಲಿಗಲ್ಲಾಗಿದೆ. ಈ ಭಾಗದ ಹೆಣ್ಣುಮಕ್ಕಳಿಗೆ ಶಿಕ್ಷಣ ಒದಗಿಸಿಕೊಡಬೇಕು ಎಂಬ ನಿಟ್ಟಿನಲ್ಲಿ ಕಾರ್ಯಪ್ರವೃತರಾಗಿದ್ದೇವೆ ಎಂದರು.

ವಿಶ್ವವಿದ್ಯಾಲಯದ ಶೈಕ್ಷಣಿಕ ಸಲಹಾ ಸಮಿತಿ ಸದಸ್ಯೆ ಗುರಮ್ಮ ಸಿದ್ದಾರಡ್ಡಿ, ಸಿಂಡಿಕೇಟ್ ಸದಸ್ಯ ಡಿ.ಬಿ.ಕಂಬಾರ, ಪ್ರೊ. ಡಿ.ಎಂ.ಜ್ಯೋತಿ, ಆರ್.ವಿ ಗಂಗಾಶೆಟ್ಟಿ‌, ಡಾ.ಬಸವರಾಜ ಪಾಟೀಲ ಅಷ್ಟೂರ, ವೆಂಕಟೇಶ ಬಡಿಗೇರ, ಪ್ರಕಾಶ ಬಡಿಗೇರ, ಪ್ರೊ.ಕಾಮಶೆಟ್ಟಿ, ಧನಶೆಟ್ಟಿ, ರಾಜಕುಮಾರ, ಧರ್ಮಣ್ಣ ಬಡಿಗೇರ, ಪಿಎಸ್ಐ ಶಿವರಾಜ್ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT