ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟದಿಂದ ಜಿಲ್ಲಾಧಿಕಾರಿಗೆ ಮನವಿ
Last Updated 6 ಮಾರ್ಚ್ 2021, 3:00 IST
ಅಕ್ಷರ ಗಾತ್ರ

ಬೀದರ್‌: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕ ಆಗ್ರಹಿಸಿದೆ.

ಸರ್ಕಾರ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಮೊತ್ತವನ್ನು ವಾರ್ಷಿಕವಾಗಿ ₹ 15 ಸಾವಿರ ಕೋಟಿಗೆ ಹೆಚ್ಚಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆದಾಯ ಮಿತಿಯನ್ನು ವಾರ್ಷಿಕ ₹ 15 ಲಕ್ಷಕ್ಕೆ ಹೆಚ್ಚಿಸಬೇಕು. ಮ್ಯಾನೇಜ್‍ಮೆಂಟ್ ಕೋಟಾದ ಅಡಿಯಲ್ಲಿ ಪ್ರವೇಶ ಪಡೆದ ದಲಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಬೇಕು ಎಂದು ಒತ್ತಾಯಿಸಿದೆ.

ಬ್ಯಾಕ್‍ಲ್ಯಾಗ್ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ ನೀಡಬೇಕು. ಬೆಲೆ ಏರಿಕೆಗೆ ತಕ್ಕಂತೆ ವಿದ್ಯಾರ್ಥಿ ವೇತನ ಹೆಚ್ಚಿಸಬೇಕು. ಹಾಸ್ಟೆಲ್ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ಕಟ್ಟಡಗಳನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿದೆ.

ಸುಪ್ರೀಂ ಕೋರ್ಟ್‌ ಹಾಗೂ ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಮೀಸಲಾತಿಯನ್ನು ಅನುಸರಿಸಬೇಕು. ಯೋಜನೆಗಳನ್ನು ಜಾರಿಗೊಳಿಸಲು ಏಕಗವಾಕ್ಷಿ ಪದ್ಧತಿಯನ್ನು ಜಾರಿಗೊಳಿಸಬೇಕು. ಸಮಾಜ ಕಲ್ಯಾಣ ಇಲಾಖೆಯಲ್ಲಿ ಅಧೀನದಲ್ಲಿ ಬರುವ ಎಲ್ಲ ನಿಗಮ ಮಂಡಳಿಗಳಿಗೆ ಸಾಲಕ್ಕಾಗಿ ಅರ್ಜಿ ಸಲ್ಲಿಸುವ ಅರ್ಹ ಫಲಾನುಭವಿಗಳಿಗೆ ಸಾಲ ಮಂಜೂರು ಮಾಡಬೇಕು ಎಂದು ಮನವಿ ಮಾಡಿದೆ.

ಸರ್ಕಾರಿ ಭೂಮಿಯಲ್ಲಿ ಅಕ್ರಮ ಸಾಗುವಳಿದಾರರು ಫಾರಂ 57ರಲ್ಲಿ ಸಕ್ರಮಕ್ಕೆ ಅರ್ಜಿ ಪಡೆಯಲು ಕಂದಾಯ ಇಲಾಖೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದೆ. 6ನೇ ತರಗತಿ ಸಮಾಜ ವಿಜ್ಞಾನ ಭಾಗ-1ರಲ್ಲಿನ `ಹೊಸ ಧರ್ಮಗಳ ಉದಯ’ (ಜೈನ-ಬೌದ್ಧ) ಪಾಠವನ್ನು ಕಲಿಕೆ/ಮೌಲ್ಯಮಾಪನಕ್ಕೆ ಪರಿಗಣಿಸದಂತೆ ಶಿಕ್ಷಣ ಸಚಿವರು ಹೊರಡಿಸಿರುವ ಸುತ್ತೋಲೆ ರದ್ದು ಮಾಡಬೇಕು ಎಂದು ಒತ್ತಾಯಿಸಿದೆ.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಬರೆದ ಮನವಿಪತ್ರವನ್ನು ಜಿಲ್ಲಾ ಸಂಚಾಲಕ ಉಮೇಶಕುಮಾರ ಸ್ವಾರಳ್ಳಿಕರ್. ಜಿಲ್ಲಾ ಸಂಘಟನಾ ಸಂಚಾಲಕ ನರಸಿಂಗ ಸಾಮ್ರಾಟ, ದಲಿತ ವಿದ್ಯಾರ್ಥಿ ಒಕ್ಕೂಟಕದ ಜಿಲ್ಲಾ ಸಂಚಾಲಕ ಸಂದೀಪ ಕಾಂಟೆ, ದಯಾನಂದ ನೌಲೆ, ವಿಜಯ ಸಾಮ್ರಾಟ, ಜೈಭೀಮ ಶರ್ಮಾ ಅವರು ಡಿ.ಸಿ ರಾಮಚಂದ್ರನ್‌ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT