ಭಾನುವಾರ, ಮಾರ್ಚ್ 26, 2023
23 °C

ಜನರಿಗೆ ಸಮರ್ಪಕ ಸೇವೆ ನೀಡಿ: ದಲಿತ ಸಂಘರ್ಷ ಸಮಿತಿ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಔರಾದ್: ‘ಸಾಲ ನೀಡುವುದು ಸೇರಿದಂತೆ ಬ್ಯಾಂಕ್‌ಗಳಲ್ಲಿ ರೈತರಿಗೆ ಹಾಗೂ ಇತರ ಗ್ರಾಹಕರಿಗೆ ಸಮರ್ಪಕ ಸೇವೆ ನೀಡಬೇಕು’ ಎಂದು ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.

ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಸತೀಶ ವಗ್ಗೆ, ಸುನೀಲ ಮಿತ್ರಾ, ರವಿ ದೇವ್ರೆ ಈಚೆಗೆ ತಹಶೀಲ್ದಾರ್ ಎಂ.ಚಂದ್ರಶೇಖರ್ ಅವರನ್ನು ಭೇಟಿ ಮಾಡಿ ಮನವಿಪತ್ರ ಸಲ್ಲಿಸಿದರು.

ತಾಲ್ಲೂಕಿನ ಕೌಠಾ (ಬಿ) ಕೆನರಾ ಬ್ಯಾಂಕ್‌ನಲ್ಲಿ ಸಿಬ್ಬಂದಿ ಗ್ರಾಹಕರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಗ್ರಾಮೀಣ ಭಾಗದ ಜನ ಬ್ಯಾಂಕ್‌ಗೆ ಬಂದಾಗ ಅವರಿಗೆ ತಿಳಿ ಹೇಳಿ ಸೂಕ್ತ ಸೇವೆ ನೀಡುವುದು ಬ್ಯಾಂಕ್ ಸಿಬ್ಬಂದಿ ಕರ್ತವ್ಯ. ಆದರೆ ಅಲ್ಲಿ ಹಾಗಾಗುತ್ತಿಲ್ಲ’ ಎಂದು ದೂರಿದ್ದಾರೆ.

ಕೊರೊನಾ ಎಲ್ಲೆಡೆ ಹರಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಸೂಕ್ತ ತಿಳವಳಿಕೆ ನೀಡಿ ಅಂತರ ಕಾಯ್ದುಕೊಳ್ಳಲು ವ್ಯವಸ್ಥೆ ಮಾಡಬೇಕು. ಗ್ರಾಹಕರ ಕೆಲಸ ಬೇಗನೆ ಮಾಡಿಕೊಟ್ಟು ಬ್ಯಾಂಕ್‌ನಲ್ಲಿ ಜನ ಸೇರದಂತೆ ನೋಡಿಕೊಳ್ಳಲು ತಾಲ್ಲೂಕಿನ ಎಲ್ಲ ಬ್ಯಾಂಕ್‌ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡುವಂತೆ ಆಗ್ರಹಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು