ಬೀದರ್: ಲೋಕಾಯುಕ್ತ ಡಿವೈಎಸ್‍ಪಿ ಎನ್.ಎಂ. ಓಲೇಕಾರ್ ಅವರು ಇಲ್ಲಿಯ ಚಂದ್ರಪ್ಪ ಗೌರಶೆಟ್ಟಿ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಿದರು.
ಕೋವಿಡ್ ಮಾರ್ಗಸೂಚಿ ಅನ್ವಯ ಸ್ವಚ್ಛತೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಬೋಧಕ-ಬೋಧಕೇತರ ಸಿಬ್ಬಂದಿ ಕೋವಿಡ್ ಲಸಿಕೆಯ ಎರಡೂ ಡೋಸ್‍ಗಳನ್ನು ತೆಗೆದುಕೊಂಡಿದ್ದಾರೆಯೇ ಎನ್ನುವುದನ್ನು ಪರಿಶೀಲಿಸಿದರು.
ವರ್ಗ ಕೋಣೆಗಳಿಗೆ ಭೇಟಿ ಕೊಟ್ಟು ವಿದ್ಯಾರ್ಥಿಗಳು ಮಾಸ್ಕ್ ಧರಿಸಿದ್ದು ಹಾಗೂ ಅಲ್ಲಲ್ಲಿ ಸೂಚನಾ ಫಲಕ ಅಳವಡಿಸಿದ್ದನ್ನು ಕಂಡು ಸಂತಸ ವ್ಯಕ್ತಪಡಿಸಿದರು.
ಕಾಲೇಜು ಪ್ರಾಚಾರ್ಯ ಡಾ. ಚಂದ್ರಪ್ಪ ಭತಮುರ್ಗೆ, ಶ್ರೀಮತಿ ಇಂದಿರಾಬಾಯಿ ಗುರುತಪ್ಪ ಶೆಟಕಾರ್ ಪ್ರೌಢಶಾಲೆಯ ಮುಖ್ಯಶಿಕ್ಷಕ ಲಕ್ಷ್ಮಣ ಪೂಜಾರಿ, ಮಾಣಿಕರಾವ್ ಪಾಂಚಾಳ ಅವರಿಂದ ವಿದ್ಯಾರ್ಥಿಗಳ ಒಟ್ಟು ಸಂಖ್ಯೆ ಹಾಗೂ ಹಾಜರಾದ ವಿದ್ಯಾರ್ಥಿಗಳ ಸಂಖ್ಯೆಯ ಮಾಹಿತಿ ಪಡೆದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.