ಮಂಗಳವಾರ, ಅಕ್ಟೋಬರ್ 26, 2021
21 °C

ಹುಮನಾಬಾದ್: ಭೂಮಿಯಲ್ಲಿ ಶಬ್ದ: ಆತಂಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಮನಾಬಾದ್: ತಾಲ್ಲೂಕಿನ ಕುಮಾರ್ ಚಿಂಚೋಳಿ ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಭೂಮಿಯಲ್ಲಿ ಆಗಾಗ ನಿಗೂಢ ಶಬ್ದ ಕೇಳಿ ಬರುತ್ತಿದೆ. ಭೂಕಂಪ ಇರಬಹುದು ಎಂದು ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಪೊಲೀಸರು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರಿಗೆ ಧೈರ್ಯ ಹೇಳಿದ್ದಾರೆ.

‘ಕಳೆದ ಕೆಲ ದಿನಗಳ ಹಿಂದೆ ಕ್ಷೇತ್ರದ ಹುಣಸನಾಳ ಗ್ರಾಮದಲ್ಲಿಯೂ ಇದೇ ರೀತಿ ಶಬ್ದ ಕೇಳಿ ಬಂದಿತ್ತು. ಹೀಗಾಗಿ ಭೂಗರ್ಭ ಶಾಸ್ತ್ರಜ್ಞರ ತಂಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿತ್ತು. ಸಮಸ್ಯೆ ಇಲ್ಲ ಎಂದು ತಿಳಿಸಿತ್ತು. ಈಗ ಕುಮಾರ ಚಿಂಚೋಳಿ ಗ್ರಾಮದಲ್ಲಿ ಶಬ್ದ ಕೇಳಿ ಬರುತ್ತಿರುವುದರಿಂದ ಗ್ರಾಮಸ್ಥರು ಆತಂಕಗೊಂಡಿರುವುದು ಗಮನಕ್ಕೆ ಬಂದಿದೆ. ದೂರವಾಣಿ ಮೂಲಕ ಗ್ರಾಮದ ಪ್ರಮುಖರ ಜತೆ ಮಾತನಾಡಿ ಧೈರ್ಯ ಹೇಳಿದ್ದೇನೆ. ಶನಿವಾರ (ಅ.9) ಮಧ್ಯಾಹ್ನ ಅಧಿಕಾರಿಗಳ ತಂಡದೊಂದಿಗೆ ಗ್ರಾಮಕ್ಕೆ ಭೇಟಿ ನೀಡುತ್ತೇನೆ’ ಎಂದು ಶಾಸಕ ರಾಜಶೇಖರ ಪಾಟೀಲ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.