ಸೋಮವಾರ, ಸೆಪ್ಟೆಂಬರ್ 26, 2022
22 °C

ಪೌಷ್ಟಿಕತೆ ನಿವಾರಣೆಗೆ ಹಣ್ಣು, ತರಕಾರಿ ಸೇವಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ನಿತ್ಯ ಆಹಾರದಲ್ಲಿ ತರಕಾರಿ ಹಾಗೂ ಹಣ್ಣು ಸೇವಿಸುವ ಮೂಲಕ ಅಪೌಷ್ಟಿಕತೆಯನ್ನು ನಿವಾರಿಸಿಕೊಳ್ಳಬಹುದು ಎಂದು ತೋಟಗಾರಿಕೆ ಮಹಾವಿದ್ಯಾಲಯದ ಡೀನ್‌ ಡಾ. ಎಸ್.ವಿ. ಪಾಟೀಲ ಹೇಳಿದರು.

ನಗರದ ಹೊರ ವಲಯದಲ್ಲಿರುವ ತೋಟಗಾರಿಕೆ ಮಹಾವಿದ್ಯಾಲಯದ ಸಭಾಂಗಣದಲ್ಲಿ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕದ ಸಹಯೋಗದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿಸ್ತರಣಾ ಮುಂದಾಳು ಡಾ. ಶ್ರೀನಿವಾಸ್ ಎನ್, ಪ್ರಾಧ್ಯಾಪಕರಾದ ಡಾ. ಎಂ.ಡಿ. ಫಾರೂಕ್, ಡಾ. ಎ.ಜಿ. ಪಾಟೀಲ, ಡಾ. ಶಶಿಕಲಾ ರುಳಿ, ಡಾ. ಅಶೋಕ ಸೂರ್ಯವಂಶಿ, ಡಾ. ಮಂಗೇಶ ಮಾತನಾಡಿದರು.

ಬೀದರ್ ತಾಲೂಕಿನ 60 ಅಂಗನವಾಡಿ ಕಾರ್ಯಕರ್ತೆಯರು ಇದ್ದರು. ಡಾ. ಪ್ರಶಾಂತ ಸ್ವಾಗತಿಸಿದರು. ಡಾ. ರಾಜಕುಮಾರ ಎಂ. ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.