ಸೋಮವಾರ, ಅಕ್ಟೋಬರ್ 18, 2021
22 °C
ಜಾನುವಾರು ಸಂಶೋಧನೆ ಕೇಂದ್ರಕ್ಕೆ ಕ್ಷೇತ್ರ ಭೇಟಿ

‘ಹೈನುಗಾರಿಕೆಯಿಂದ ಆರ್ಥಿಕ ಸಬಲತೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಕಲಬುರ್ಗಿಯ ಮೈರಾಡಾ ಸಂಸ್ಥೆ ವತಿಯಿಂದ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ನಬಾರ್ಡ್) ಪ್ರಾಯೋಜಿತ ತರಬೇತಿ ಕಾರ್ಯಕ್ರಮದಡಿ 30 ರೈತ ಮಹಿಳೆಯರು ಹುಮನಾಬಾದ್ ತಾಲ್ಲೂಕಿನ ಹಳ್ಳಿಖೇಡ(ಬಿ) ಸಮೀಪದ ಜಾನುವಾರು ಸಂಶೋಧನೆ ಹಾಗೂ ಮಾಹಿತಿ ಕೇಂದ್ರ (ದೇವಣಿ)ಕ್ಕೆ ಕ್ಷೇತ್ರ ಭೇಟಿ ನೀಡಿದರು.

ಲಾಭದಾಯಕ ಪಶು ಪಾಲನೆ ಜಾನುವಾರು ನಿರ್ವಹಣೆ ಪದ್ಧತಿ, ಬೀದರ್‍ನಲ್ಲಿ ಇರುವ ವಿವಿಧ ರೀತಿಯ ಮೇವಿನ ಬೆಳೆಗಳ ಕುರಿತು ಮಾಹಿತಿ ಪಡೆದರು.

ರೈತರು ಕೃಷಿಯ ಜತೆಗೆ ಹೈನುಗಾರಿಕೆಯಂತಹ ಉಪಕಸುಬುಗಳನ್ನು ಕೈಗೊಂಡರೆ ಆರ್ಥಿಕವಾಗಿ ಸಬಲರಾಗಬಹುದು ಎಂದು ಕೇಂದ್ರದ ಮುಖ್ಯಸ್ಥ ಡಾ. ಪ್ರಕಾಶಕುಮಾರ ರಾಠೋಡ್ ತಿಳಿಸಿದರು.

ರೈತ ಮಹಿಳೆಯರಿಗೆ ಸೂಪರ್ ನೇಪಿಯರ್ ಮೇವಿನ ತುಂಡು ಹಾಗೂ ಚೊಗಚೆ ಮೇವಿನ ಬೀಜಗಳನ್ನು ವಿತರಿಸಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.