ಶನಿವಾರ, ಮೇ 28, 2022
30 °C
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರವೀಂದ್ರ ರೆಡ್ಡಿ ಹೇಳಿಕೆ

ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಟಗುಪ್ಪ: ‘ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಆದ್ಯತೆ ನೀಡಬೇಕು’ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರವೀಂದ್ರ ರೆಡ್ಡಿ ಹೇಳಿದರು.

ಪಟ್ಟಣದಲ್ಲಿ ಶನಿವಾರ ನಡೆದ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕರ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಶಿಕ್ಷಕರ ಕುಟುಂಬದ ಆರೋಗ್ಯ ಸಂರಕ್ಷಣೆಗೆ ಸರ್ಕಾರ ಜ್ಯೋತಿ ಸಂಜಿವಿನಿ ಪ್ರಮಾಣ ಪತ್ರ ವಿತರಣೆ ಮಾಡುತ್ತಿದೆ. ಎಲ್ಲರೂ ಯೋಜನೆ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದರು.

ಕ್ಷೇತ್ರ ಸಮನ್ವಯಾಧಿಕಾರಿ ಶಿವಕುಮಾರ ಪರಶೆಟ್ಟಿ ಮಾತನಾಡಿ,‘ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರು ಕಡ್ಡಾಯವಾಗಿ 12 ರಿಂದ 14 ವರ್ಷದ ಮಕ್ಕಳಿಗೆ ಕೊವೀಡ್‌ ಲಸಿಕೆ ಹಾಕಿಸುವ ಕೆಲಸವನ್ನು ಪೂರ್ಣಗೊಳಿಸಬೇಕು’ ಎಂದರು.

ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಕಾರ್ಯದರ್ಶಿ ರಮೇಶ ಕಲ್ಯಾಣ ಮಾತನಾಡಿದರು. ಮಂಜುಳಾ, ಸತೀಶ ಮಾಳಾ, ಸಂಜೀವ ರಡ್ಡಿ, ಮಹೇಶ ಪಾಟೀಲ, ಸಂಗಮೇಶ ಜವಾದಿ, ಪ್ರಮೀಳಾ ರಡ್ಡಿ ಹಾಗೂ ರಮೇಶ ಖ್ಯಾತಾ ಇದ್ದರು.

ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಾಜಪ್ಪ ಜಮಾದಾರ್‌ ಅಧ್ಯಕ್ಷತೆ ವಹಿಸಿದ್ದರು. ಸಂತೋಷ ನಿರೂಪಿಸಿದರು. ರಾಂಪುರೆ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.