ಬೀದರ್: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸಚಿವ ಸುರೇಶ್ ಕುಮಾರ್ ಸೆ.29ರಂದು ಬೀದರ್ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಮಂಗಳವಾರ ಕಲಬುರ್ಗಿಯಿಂದ ಹೊರಟು ಬೆಳಿಗ್ಗೆ 9 ಗಂಟೆಗೆ ಬೀದರ್ಗೆ ಬರುವರು. ನಂತರ ಬೀದರ್ ತಾಲ್ಲೂಕಿನ ಯಾಕತಪುರದ ಇನ್ಫಂಟ್ ಜೀಸಸ್ ಹಿರಿಯ ಪ್ರಾಥಮಿಕ ಶಾಲೆ, ಕಮಲನಗರ ತಾಲ್ಲೂಕಿನ ತೋರಣಾದ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕಮಲನಗರದ ಸಿದ್ದಗಂಗಮ್ಮ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ಕೊಡುವರು.
ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. 2 ಗಂಟೆಗೆ ಬೀದರ್ನಿಂದ ಹೈದರಾಬಾದ್ ಮಾರ್ಗವಾಗಿ ಚಿಕ್ಕಬಳ್ಳಾಪುರ ತೆರಳುವರು. ಸಚಿವರ ಪ್ರವಾಸದ ಸಂದರ್ಭದಲ್ಲಿ ಹೂಗುಚ್ಛ ಹಾಗೂ ಹೂವಿನಹಾರಗಳನ್ನು ನೀಡಬಾರದು ಎಂದು ಸಚಿವರ ಆಪ್ತ ಕಾರ್ಯದರ್ಶಿ ಚಿದಂಬರ ಪಿ.ಎಂ.ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಸಾಧಾರಣ ಮಳೆ

ಬೀದರ್, ಭಾಲ್ಕಿ ಕಮಲನಗರ ಔರಾದ್ನಲ್ಲಿ ಶುಕ್ರವಾರ ಸಂಜೆ ಸಾಧಾರಣ ಮಳೆಯಾಗಿದೆ. ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೂ ಬಿಸಿಲಿನ ವಾತಾವರಣ ಇತ್ತು. ಸಂಜೆ ಇದ್ದಕ್ಕಿದ್ದಂತೆಯೇ ಮೋಡ ಕವಿದು ಮಳೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.