ವಿವಿಧ ಗೋಷ್ಠಿಗಳಲ್ಲಿ ಸಾಹಿತಿಗಳು, ಚಿಂತಕರು, ಗಣ್ಯರು ಪಾಲ್ಗೊಳ್ಳುವರು. ರಂಗ ಮಂದಿರದಲ್ಲಿ ಚಿತ್ರಕಲಾ ಪ್ರದರ್ಶನ, ಪುಸ್ತಕ ಮಳಿಗೆ, ವಾಣಿಜ್ಯ ಮಳಿಗೆಗಳು ಇರಲಿವೆ. ಸಮ್ಮೇಳನದಲ್ಲಿ ಪಾಲ್ಗೊಳ್ಳುವವರಿಗೆ ಭೋಜನ ವ್ಯವಸ್ಥೆ ಮಾಡಲಾಗಿದೆ. ಶುಕ್ರವಾರ ಬೆಳಿಗ್ಗೆ 6ಕ್ಕೆ ಧ್ವಜಾರೋಹಣ ನಡೆಯಲಿದೆ. ಬೆಳಿಗ್ಗೆ 8.30ಕ್ಕೆ ಮೆರವಣಿಗೆ ನಡೆಯಲಿದೆ. ಬೆಳಿಗ್ಗೆ 11ಕ್ಕೆ ರಂಗ ಮಂದಿರದಲ್ಲಿ ಸಾಹಿತಿ ಕುಂ. ವೀರಭದ್ರಪ್ಪ ಸಮ್ಮೇಳನ ಉದ್ಘಾಟಿಸುವರು. ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಸಾನ್ನಿಧ್ಯ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದ್ದಾರೆ.