ಶನಿವಾರ, ಜನವರಿ 28, 2023
15 °C
ಶರಣಬಸವ ಪಬ್ಲಿಕ್ ಸ್ಕೂಲ್‍ನಲ್ಲಿ ವಿಚಾರ ಸಂಕಿರಣ: ಯಂಡಮೂರಿ ವೀರೇಂದ್ರನಾಥ ಹೇಳಿಕೆ

ಪ್ರಯತ್ನವೇ ಯಶಸ್ಸಿನ ಸೂತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ‘ನಿರಂತರ ಪ್ರಯತ್ನವೇ ಯಶಸ್ಸಿನ ಸೂತ್ರ’ ಎಂದು ಸಾಹಿತಿ ಡಾ.ಯಂಡಮೂರಿ ವೀರೇಂದ್ರನಾಥ ಹೇಳಿದರು.

ಇಲ್ಲಿಯ ಶರಣಬಸವ ಕ್ಯಾಂಪಸ್‍ನಲ್ಲಿ ಶರಣಬಸವ ಪಬ್ಲಿಕ್ ಸ್ಕೂಲ್ ಹಾಗೂ ಶರಣಬಸವೇಶ್ವರ ವಸತಿ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ಕಾಲೇಜು ವತಿಯಿಂದ ನಡೆದ ‘ಸೆಲ್ ಯುವರ್‍ಸೆಲ್ಫ್ ಫಾರ್ ಬೆಟರ್ ಪ್ರೈಸ್’ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಅಸಾಧ್ಯವಾದದ್ದು ಯಾವುದೂ ಇಲ್ಲ. ಹೀಗಾಗಿ ವಿದ್ಯಾರ್ಥಿಗಳು ನನ್ನಿಂದ ಆಗದು ಎನ್ನುವ ಕೀಳರಿಮೆಯನ್ನು ಬಿಟ್ಟಿಕೊಡಬೇಕು. ಸಾಧಿಸಿಯೇ ತೀರುವ ಛಲ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಸ್ಮರಣ ಶಕ್ತಿ ಹೆಚ್ಚಳ, ಮನಸ್ಸಿನ ನಿಯಂತ್ರಣ, ಸಂದರ್ಶನಗಳಲ್ಲಿ ಯಶ ಗಳಿಸಲು ಏನು ಮಾಡಬೇಕು ಎನ್ನುವುದನ್ನು ಎಳೆ ಎಳೆಯಾಗಿ ವಿವರಿಸಿದರು.

ಕಲಬುರಗಿಯ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಶರಣಬಸವಪ್ಪ ಅಪ್ಪ, ದಾಕ್ಷಾಯಣಿ ಎಸ್‌.ಅಪ್ಪ, ಚಿ. ದೊಡ್ಡಪ್ಪ ಅಪ್ಪ, ಕಾರ್ಯದರ್ಶಿ ಬಸವರಾಜ ದೇಶಮುಖ ಹಾಗೂ ನಿರ್ದೇಶಕ ಶರಣಬಸಪ್ಪ ದೇಶಮುಖ ಅವರ ಪ್ರೇರಣೆಯಿಂದ ಸಂಸ್ಥೆಯ ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಸೂತ್ರ ತಿಳಿಸುವ ಹಾಗೂ ಸಾಧನೆಗೆ ಪ್ರೇರೇಪಿಸುವ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಶರಣಬಸವೇಶ್ವರ ವಸತಿ ವಿಜ್ಞಾನ, ಕಲಾ ಹಾಗೂ ವಾಣಿಜ್ಯ ಕಾಲೇಜು ಪ್ರಾಚಾರ್ಯ ಡಾ. ಸತೀಶ ಪ್ರತಾಪುರ ಹೇಳಿದರು.

ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು ಪ್ರಾಚಾರ್ಯೆ ವಿನಿತಾ ಪಾಟೀಲ ಮಾತನಾಡಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು