ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಂಜಾನ್: ಮನೆಯಲ್ಲಿಯೇ ಪ್ರಾರ್ಥನೆ

Last Updated 26 ಮೇ 2020, 1:50 IST
ಅಕ್ಷರ ಗಾತ್ರ

ಭಾಲ್ಕಿ: ಪಟ್ಟಣ ಸೇರಿದಂತೆ ತಾಲ್ಲೂಕಿನ ಎಲ್ಲೆಡೆ ಮುಸ್ಲಿಂ ಬಾಂಧವರು ಒಂದು ತಿಂಗಳ ಉಪವಾಸ ವೃತಾಚರಣೆಯ ನಂತರ ರಂಜಾನ್ ಹಬ್ಬವನ್ನು ತಮ್ಮ-ತಮ್ಮ ಮನೆಗಳಲ್ಲಿಯೇ ಸಡಗರದಿಂದ ಆಚರಿಸಿ, ಪರಸ್ಪರರಿಗೆ ಶುಭ ಕೋರಿ ಮನೆಯಲ್ಲಿಯೇ ಪ್ರಾರ್ಥನೆ ಸಲ್ಲಿಸಿದರು.

ಕೊರೊನಾ ವೈರಾಣುವಿನ ಹರಡುವಿಕೆಯನ್ನು ತಡೆಯಲು ಸರ್ಕಾರ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ನಿಷೇಧಿಸಿದ್ದರಿಂದ ಎಲ್ಲ ಮುಸ್ಲಿಂ ಬಾಂಧವರು ತಮ್ಮ ಕುಟುಂಬ ಸದಸ್ಯರೊಂದಿಗೆ ಮನೆಯಲ್ಲಿಯೇ ಪ್ರಾರ್ಥನೆ ಸಲ್ಲಿಸಿದರು.

ಶೇಕ್ ಅಜಿಮೋದ್ದಿನ್, ಶೇಕ್ ಆಯುಬ್, ಶೇಕ್ ಸಾಬೇರಮಿಯಾ ಪಟೇಲ್, ಶೇಕ್ ಖಲೀಲ್, ನಬೀಸಾಬ್, ಎಂ.ಡಿ.ರಫೀಕ್ ಸೇರಿದಂತೆ ಎಲ್ಲ ಮುಸ್ಲಿಂ ಬಾಂಧವರು ರಂಜಾನ್ ಹಬ್ಬದ ಸಡಗರದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT