ಲೋಕಸಭೆ ಚುನಾವಣಾ ಪ್ರಚಾರ ರಾಜ್ಯದಿಂದ ಆರಂಭ: ಈಶ್ವರ ಖಂಡ್ರೆ

7
13 ರಂದು ಬೀದರ್‌ಗೆ ರಾಹುಲ್ ಗಾಂಧಿ

ಲೋಕಸಭೆ ಚುನಾವಣಾ ಪ್ರಚಾರ ರಾಜ್ಯದಿಂದ ಆರಂಭ: ಈಶ್ವರ ಖಂಡ್ರೆ

Published:
Updated:
Deccan Herald

ಬೀದರ್: ‘ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಾಹುಲ್ ಗಾಂಧಿ ಆಗಸ್ಟ್ 13 ರಂದು ನಗರಕ್ಕೆ ಬರಲಿದ್ದು, ಲೋಕಸಭೆ ಚುನಾವಣಾ ಪ್ರಚಾರಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ತಿಳಿಸಿದರು.

‘ಇಲ್ಲಿಯ ನೆಹರೂ ಕ್ರೀಡಾಂಗಣದಲ್ಲಿ 13 ರಂದು ಬೆಳಿಗ್ಗೆ 11 ಗಂಟೆಗೆ ಆಯೋಜಿಸಿರುವ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಳ್ಳುವ ರಾಹುಲ್‌ ಅವರು ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಮಧ್ಯೆ ಮೂರು ತಾಸು ಕಾಲ ಕಳೆಯಲಿದ್ದಾರೆ. ನಂತರ ತೆಲಂಗಾಣಕ್ಕೆ ಪ್ರಯಾಣ ಬೆಳೆಸಲಿದ್ದಾರೆ’ ಎಂದು ನಗರದಲ್ಲಿ ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.

‘ಡಿಸೆಂಬರ್‌ ಅಥವಾ ಜನವರಿಯಲ್ಲಿ ಲೋಕಸಭೆಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ಎನ್‌ಡಿಎ ಸರ್ಕಾರದ ದುರಾಡಳಿ ಅಂತ್ಯಗೊಳಿಸಲು ಈಗಿನಿಂದಲೇ ಸಿದ್ಧತೆ ಆರಂಭಿಸಲಾಗುವುದು. ಲೋಕಸಭೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವುದು ಖಚಿತ. ಆದರೆ, ಅದಕ್ಕೂ ಮುನ್ನ ಕಾಂಗ್ರೆಸ್–ಜೆಡಿಎಸ್ ವರಿಷ್ಠರು ಸ್ಥಾನ ಹಂಚಿಕೆ ಕುರಿತು ಚರ್ಚೆ ನಡೆಸಲಿದ್ದಾರೆ’ ಎಂದು ತಿಳಿಸಿದರು.

ಎರಡು ಲಕ್ಷ ಜನ ನಿರೀಕ್ಷೆ: ‘ರಾಹುಲ್‌ ಗಾಂಧಿ ಅಭಿನಂದನಾ ಸಮಾರಂಭದಲ್ಲಿ ಎರಡು ಲಕ್ಷ ಜನರನ್ನು ಸೇರಿಸಲಾಗುವುದು. ಬೀದರ್‌ ಲೋಕಸಭಾ ಕ್ಷೇತ್ರದಲ್ಲಿರುವ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಿಂದ ಕನಿಷ್ಠ 20 ಸಾವಿರ ಜನ ಬರಲಿದ್ದಾರೆ’ ಎಂದು ಖಂಡ್ರೆ ಹೇಳಿದರು.

‘ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ, ಲೋಕಸಭೆಯ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನಸಭೆಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ. ಶಿವಕುಮಾರ ಪಾಲ್ಗೊಳ್ಳಲಿದ್ದಾರೆ’ ಎಂದು ತಿಳಿಸಿದರು.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !