ಬೀದರ್: ವಿಧಾನಸಭೆ ಚುನಾವಣೆ ಪ್ರಯುಕ್ತ ಬಿಜೆಪಿಯ ಜಿಲ್ಲಾ ಚುನಾವಣೆ ಪ್ರಣಾಳಿಕೆ ಸಮಿತಿಯು ಜಿಲ್ಲೆಯಲ್ಲಿ ಶೀಘ್ರ ವಿಧಾನಸಭಾ ಕ್ಷೇತ್ರ ಸಮಿತಿಗಳನ್ನು ರಚಿಸಲು ನಿರ್ಧರಿಸಿದೆ.
ನಗರದ ನೌಬಾದ್ನ ಪಕ್ಷದ ಜಿಲ್ಲಾ ಘಟಕದ ಕಚೇರಿಯಲ್ಲಿ ನಡೆದ ಜಿಲ್ಲಾ ಚುನಾವಣೆ ಪ್ರಣಾಳಿಕೆ ಸಮಿತಿ ಸಭೆಯಲ್ಲಿ ಸಮಿತಿಯ ಜಿಲ್ಲಾ ಸಂಚಾಲಕ ಗುರುನಾಥ ಜ್ಯಾಂತಿಕರ್ ಈ ವಿಷಯ ತಿಳಿಸಿದರು.
ಜಿಲ್ಲೆಯ ಆರೂ ವಿಧಾನಸಭಾ ಕ್ಷೇತ್ರಗಳಲ್ಲಿ ಸಮಿತಿ ರಚಿಸಲಾಗುವುದು. ಸಮಿತಿಗಳಿಂದ ಪ್ರಣಾಳಿಕೆಯಲ್ಲಿ ಯಾವ ಯಾವ ಅಂಶಗಳನ್ನು ಸೇರಿಸಬಹುದು ಎನ್ನುವ ಮಾಹಿತಿ ಸಂಗ್ರಹಿಸಲಾಗುವುದು. ಬಳಿಕ, ಜಿಲ್ಲಾ ಸಮಿತಿಯ ಸಹ ಸಂಚಾಲಕರ ಸಲಹೆಯನ್ನೂ ಪಡೆದು, ಕ್ರೋಡೀಕೃತ ವರದಿಯನ್ನು ರಾಜ್ಯ ಸಮಿತಿಗೆ ಕಳುಹಿಸಲಾಗುವುದು ಎಂದು ಹೇಳಿದರು.
ಚುನಾವಣೆ ಪ್ರಣಾಳಿಕೆ ಸಮಿತಿಯ ಜಿಲ್ಲಾ ಸಹ ಸಂಚಾಲಕರಾದ ಬಸವರಾಜ ಪವಾರ್, ಶಿವರಾಜ ಕುದುರೆ, ನಿತಿನ್ ಕರ್ಪೂರ, ಸಂಜೀವಕುಮಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.