ಶುಕ್ರವಾರ, ಆಗಸ್ಟ್ 19, 2022
25 °C

14ರಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಜಿಲ್ಲಾ ಪಂಚಾಯಿತಿಯ ತೆರವಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಡಿಸೆಂಬರ್ 14ರಂದು ಚುನಾವಣೆ ನಡೆಸಲು ನಿರ್ಧರಿಸಲಾಗಿದೆ.

2016ರಲ್ಲಿ ರಚಿತ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡದ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಅಭ್ಯರ್ಥಿಗೆ ಮೀಸಲಿದೆ. ಅವಿಶ್ವಾಸ ಗೊತ್ತುವಳಿಯಿಂದ ತೆರವಾದ ಸ್ಥಾನಗಳಿಗೆ ಡಿಸೆಂಬರ್ 14ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ.

ಅಭ್ಯರ್ಥಿಗಳು 14ರಂದು ಮಧ್ಯಾಹ್ನ 1 ಗಂಟೆ ಒಳಗೆ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಳಿ ನಾಮಪತ್ರ ಸಲ್ಲಿಸಬೇಕು.ಅಧ್ಯಕ್ಷ ಸ್ಥಾನದ ಚುನಾವಣೆ ಪ್ರಕ್ರಿಯೆ 3 ಗಂಟೆಗೆ ಆರಂಭವಾಗಲಿದೆ. ನಾಮಪತ್ರಗಳ ಪರಿಶೀಲನೆ ಹಾಗೂ ನಾಮಪತ್ರ ಹಿಂದಕ್ಕೆ ಪಡೆಯುವ ಪ್ರಕ್ರಿಯೆ ಇದೇ ಅವಧಿಯಲ್ಲಿ ಪೂರ್ಣಗೊಳ್ಳಲಿದೆ.

ಅಧ್ಯಕ್ಷ ಸ್ಥಾನದ ಚುನಾವಣೆ ಮುಗಿದ ನಂತರ ಉಪಾಧ್ಯಕ್ಷ ಸ್ಥಾನದ ಚುನಾವಣೆ ನಡೆಯಲಿದೆ. ಅಂದು ಮಧ್ಯಾಹ್ನ 2.45ರಿಂದ 3 ಗಂಟೆ ವರೆಗೆ ಎಲ್ಲ ಸದಸ್ಯರು ಹಾಜರಿರಬೇಕು ಎಂದು ಕಲಬುರ್ಗಿ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

16 ರಂದು ಡಿಸಿಸಿ ಬ್ಯಾಂಕ್ ವಾರ್ಷಿಕ ಮಹಾಸಭೆ

ಬೀದರ್: ಜಿಲ್ಲಾ ಸಹಕಾರ ಕೇಂದ್ರ(ಡಿಸಿಸಿ) ಬ್ಯಾಂಕ್‍ನ 98ನೇ ವಾರ್ಷಿಕ ಮಹಾಸಭೆ ಡಿಸೆಂಬರ್ 16 ರಂದು ಮಧ್ಯಾಹ್ನ 1.45ಕ್ಕೆ ನಗರದ ಬ್ಯಾಂಕ್ ಕೇಂದ್ರ ಕಚೇರಿಯ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಸಭಾಂಗಣದಲ್ಲಿ ನಡೆಯಲಿದೆ.

ಬ್ಯಾಂಕ್ ಸದಸ್ಯರು ಸಭೆಯಲ್ಲಿ ತಪ್ಪದೆ ಭಾಗವಹಿಸಬೇಕು ಎಂದು ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನವಿ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು