ಔರಾದ್: ಇಲ್ಲಿಯ ಪಟ್ಟಣ ಪಂಚಾಯಿತಿ 10ನೇ ಅವಧಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಸರುಬಾಯಿ ಘುಳೆ, ಉಪಾಧ್ಯಕ್ಷರಾಗಿ ರಾಧಾಬಾಯಿ ನರೋಟೆ ಅವಿರೋಧವಾಗಿ ಆಯ್ಕೆಯಾದರು.
ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಒದೊಂದೇ ನಾಮಪತ್ರ ಬಂದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯೂ ಆದ ತಹಶೀಲ್ದಾರ್ ಮಲಶೆಟ್ಟಿ ಚಿದ್ರೆ ಅವಿರೋಧ ಆಯ್ಕೆ ಎಂದು ಘೋಷಣೆ ಮಾಡಿದರು.
20 ಸದಸ್ಯ ಬಲದ ಪಟ್ಟಣ ಪಂಚಾಯತ್‍ನಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಶಾಸಕ ಪ್ರಭು ಚವಾಣ್ ಹಾಗೂ 15 ಸದಸ್ಯರು ಪಾಲ್ಗೊಂಡು ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಬೆಂಬಲಿಸಿದರು. ಐದು ಸದಸ್ಯರು ಚುನಾವಣೆ ಪ್ರಕ್ರಿಯಿಂದ ದೂರ ಉಳಿದರು. ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸ್ವಾಮಿದಾಸ ಹಾಗೂ ಸಿಬ್ಬಂದಿ ಚುನಾವಣೆ ಕಾರ್ಯಕ್ಕೆ ಸಹಕರಿಸಿದರು.
ವಿಜಯೋತ್ಸವ: ನೂತನ ಪಟ್ಟಣ ಪಂಚಾಯತ್ ಅಧ್ಯಕ್ಷ-ಉಪಾಧ್ಯಕ್ಷರ ಹೆಸರು ಘೋಷಣೆಯಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
‘ಪಟ್ಟಣದ ಸಮಗ್ರ ಅಭಿವೃದ್ಧಿ ಹಿತದಿಂದ ಎಲ್ಲ ಸದಸ್ಯರು ಒಮ್ಮತದಿಂದ ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಆಯ್ಕೆ ಮಾಡಿದ್ದಾರೆ’ ಎಂದು ಶಾಸಕ ಪ್ರಭು ಚವಾಣ್ ಹೇಳಿದರು.
‘ಅಭಿವೃದ್ಧಿ ನಮ್ಮ ಮೂಲ ಆದ್ಯತೆ. ಹೀಗಾಗಿ ಸದಸ್ಯರೆಲ್ಲ ಸೇರಿ ಪಟ್ಟಣದ ಅಭಿವೃದ್ಧಿ ಮಾಡಬೇಕು. ಅದಕ್ಕಾಗಿ ತಾವು ಎಲ್ಲ ರೀತಿಯಿಂದ ಸಹಕಾರ ನೀಡುವುದಾಗಿ’ ಹೇಳಿದರು.
ಶಾಸಕ ಶೈಲೇಂದ್ರ ಬೆಲ್ದಾಳೆ, ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ, ತಾಲ್ಲೂಕು ಅಧ್ಯಕ್ಷ ರಾಮಶೆಟ್ಟಿ ಪನ್ನಾಳೆ, ಜಿಲ್ಲಾ ಮುಖಂಡ ಕಿರಣ ಪಾಟೀಲ, ಶಿವರಾಜ ಅಲ್ಮಾಜೆ, ಪೀರಪ್ಪ ಔರಾದೆ, ಧೊಂಡಿಬಾ ನರೋಟೆ, ದಯಾನಂದ ಘುಳೆ, ಕೇರಬಾ ಪವಾರ್, ಸಂತೋಷ ಪೋಕಲವಾರ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.