ಮಂಗಳವಾರ, ಏಪ್ರಿಲ್ 20, 2021
29 °C
ಜಿಲ್ಲಾ ಪಂಚಾಯಿತಿಯಲ್ಲಿ ಅಂಗವಿಕಲರೇ ಕಾರ್ಯನಿರ್ವಹಿಸುವ ವಿಶೇಷ ಮತಗಟ್ಟೆ

ಮತಗಟ್ಟೆಗೆ ತೆರಳಿದ ಚುನಾವಣಾ ಸಿಬ್ಬಂದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ಲೋಕಸಭಾ ಕ್ಷೇತ್ರದ ಚುನಾವಣಾ ಕಾರ್ಯಕ್ಕೆ ನೇಮಕಗೊಂಡಿರುವ ಮತಗಟ್ಟೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ನಗರದ ಬಿ.ವಿ.ಭೂಮರಡ್ಡಿ ಕಾಲೇಜು ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಅಗತ್ಯ ಸಾಮಗ್ರಿಗಳನ್ನು ವಿತರಿಸುವ ಕಾರ್ಯ ಸೋಮವಾರ ನಡೆಯಿತು.

ಮಸ್ಟರಿಂಗ್‌ ಕಾರ್ಯದಲ್ಲಿ ಆಯಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಿಯೋಜನೆಗೊಂಡಿರುವ ಸಿಬ್ಬಂದಿ ಇವಿಎಂ, ವಿವಿಪ್ಯಾಟ್‌, ಬ್ಯಾಲೆಟ್‌ ಯೂನಿಟ್‌, ಶಾಯಿ, ರಟ್ಟು ಹಾಗೂ ಇತರೆ ಮತಗಟ್ಟೆ ಸಾಮಗ್ರಿಗಳನ್ನು ಸ್ಥಳದಲ್ಲೇ ಪರಿಶೀಲಿಸಿಕೊಂಡರು. ಕೆಲ ಸಿಬ್ಬಂದಿ ಸ್ಥಳದಲ್ಲೇ ಉಪಕರಣಗಳನ್ನು ಪ್ರಾಯೋಗಿಕವಾಗಿ ಜೋಡಣೆ ಮಾಡಿಕೊಂಡು ಗೊಂದಲ ನಿವಾರಿಸಿಕೊಂಡರು.

ಮತದಾನ ಪ್ರಕ್ರಿಯೆಗೆ ತೆರಳುವ ಸಿಬ್ಬಂದಿ ಹಾಗೂ ಪೊಲೀಸರನ್ನು ಕರೆದುಕೊಂಡು ಹೋಗಲು ಕೆಎಸ್‌ಆರ್‌ಟಿಸಿ ಬಸ್‌ಗಳು ಕಾಲೇಜಿನ ಆವರಣದಲ್ಲಿ ಜಮಾವಣೆಗೊಂಡಿದ್ದವು. ಈ ಬಸ್‌ಗಳಲ್ಲಿ ತಮ್ಮ ಮತಗಟ್ಟೆ ಕೇಂದ್ರಗಳತ್ತ ಪ್ರಯಾಣ ಬೆಳೆಸಿದರು.

ಸೂಕ್ಷ್ಮ ಮತಗಟ್ಟೆಗಳಲ್ಲಿ ಒಬ್ಬ ಹೆಡ್‌ಕಾನ್‌ಸ್ಟೆಬಲ್‌ ಹಾಗೂ ಗೃಹ ರಕ್ಷಕ ಸಿಬ್ಬಂದಿ, ಸಾಮಾನ್ಯ ಮತಗಟ್ಟೆಯಲ್ಲಿ ಒಬ್ಬ ಪೊಲೀಸ್‌ ಕಾನ್‌ಸ್ಟೆಬಲ್‌ ನಿಯೋಜಿಸಲಾಗಿದೆ. ಪ್ರತಿಯೊಂದು ಮತಗಟ್ಟೆಗೆ ನೇಮಕವಾದ ಸಿಬ್ಬಂದಿಗೆ ಊಟದ ವ್ಯವಸ್ಥೆ, ಮೆಡಿಕಲ್‌ ಕಿಟ್‌ಗಳನ್ನು ಪೂರೈಸಲಾಗಿದೆ. ಚುನಾವಣಾ ಸಿಬ್ಬಂದಿ ಮತಗಟ್ಟೆಗೆ ತೆರಳಲು 244 ಬಸ್‌ಗಳು, 134 ಕ್ರೂಸರ್‌, 219 ಜೀಪ್‌ಗಳು ಹಾಗೂ 120 ಇನ್ನಿತರ ವಾಹನಗಳ ವ್ಯವಸ್ಥೆ ಮಾಡಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು