ಸೋಮವಾರ, 14 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹುಲಸೂರ: ಭಾರಿ ಮಳೆಗೆ ಬಾಗಿದ ವಿದ್ಯುತ್ ಕಂಬ

Published : 26 ಸೆಪ್ಟೆಂಬರ್ 2024, 15:57 IST
Last Updated : 26 ಸೆಪ್ಟೆಂಬರ್ 2024, 15:57 IST
ಫಾಲೋ ಮಾಡಿ
Comments

ಹುಲಸೂರ: ಸಮೀಪದ ಭಾಲ್ಕಿ ತಾಲ್ಲೂಕಿನ ಸಾಯಗಾಂವ ಹೋಬಳಿಯಲ್ಲಿ ಗುರುವಾರ ಭಾರಿ ಮಳೆ ಸುರಿದಿದೆ. ಮಧ್ಯಾಹ್ನ 4.30ಕ್ಕೆ ಆರಂಭವಾದ ಮಳೆ ಸುಮಾರು ಎರಡೂ ತಾಸು ಸುರಿಯಿತು.

ಅಳವಾಯಿ, ಅಟ್ಟರಗಾ, ಮೆಹಕರ, ಹಲಸಿ ತುಗಾಂವ, ಸಾಯಗಾಂವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರದೇಶಗಳಲ್ಲಿ ಮಳೆಯಿಂದ ಹಳ್ಳಗಳು ತುಂಬಿ ಹರಿಯುತ್ತಿದ್ದು, ಕಟಾವಿಗೆ ಬಂದ ಸೋಯಾ ಅವರೆ ಬೆಳೆಗಳು ಹಾಳಾಗಿವೆ. ಕೆಲವೆಡೆ ವಿದ್ಯುತ್ ಕಂಬಗಳು ಬಾಗಿವೆ. ಇನ್ನು ಹೊಲಗಳ ಒಡ್ಡುಗಳು ಕೊಚ್ಚಿಕೊಂಡು ಹೋಗಿವೆ.

ಹೊಲಗಳಿಂದ ಮಳೆ ನೀರು ಹೊರ ನುಗ್ಗಿ ಬಂದಿರುವ ಪರಿಣಾಮ ಕಸದ ರಾಶಿಯ ಕಲುಷಿತ ನೀರು ಗ್ರಾಮಗಳ ಸಮೀಪದ ಹಳ್ಳಗಳಲ್ಲಿ ಹರಿಯುತ್ತಿದೆ. ದುರ್ನಾತದಿಂದ ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ.

ಸೂಕ್ತ ಪರಿಹಾರಕ್ಕೆ ಒತ್ತಾಯ: ಮೂರು ದಿನದಿಂದ ಹೋಬಳಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಬೆಳೆಗಳು ಸಂಪೂರ್ಣ ನಾಶವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಗಮನಹರಿಸಬೇಕು. ರೈತರಿಗೆ ಸಲಹೆ ನೀಡಬೇಕು. ಕೆಲ ಕಡೆ ಮಳೆ ಬಂದು ರೈತರ ಬೆಳೆಗಳು ಸಂಪೂರ್ಣ ಹಾಳಾಗಿವೆ. ಆದರೂ ಇಲ್ಲಿಯವರೆಗೆ ಸ್ಥಳಕ್ಕೆ ಕೃಷಿ ಅಧಿಕಾರಿಗಳು ಭೇಟಿ ನೀಡಿಲ್ಲ. ತಕ್ಷಣ ಅಧಿಕಾರಿಗಳು ಬೆಳೆ ಪರಿಹಾರ ನೀಡಿ ನೆರವಿಗೆ ಬರಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT